BEL ನ 360 ಹುದ್ದೆಗಳಿಗೆ ಅರ್ಜಿ ಆಹ್ವಾನ: BE, B Tech ಆದವರು ಅರ್ಜಿ ಸಲ್ಲಿಸಿ

ತಂತ್ರಜ್ಞಾನ

ಬೆಂಗಳೂರುಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸ ಲಾಗಿದೆ. ಒಟ್ಟು 360 ಹುದ್ದೆಗಳು ಖಾಲಿ ಇದ್ದು, ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 10 ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಒಟ್ಟು 360  ಹುದ್ದೆಗಳ ಮಾಹಿತಿ ಇಂತಿದೆ:
ಟೆಕ್ನಿಶಿಯನ್ ಅಪ್ರೆಂಟಿಸ್  – 100 ಹುದ್ದೆಗಳು
ಗ್ರಾಜುಯೇಟ್ ಅಪ್ರೆಂಟಿಸ್  – 260 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆಬಿಇಎಲ್ (BEL) ನಲ್ಲಿ ಖಾಲಿ ಇರುವ  ಅಪ್ರೆಂಟಿಸ್  ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ  B.E,B.Tech ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಮಾಡಿರಬೇಕು.

ವಯೋಮಿತಿಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​  ನೇಮಕಾತಿಯ ಅಪ್ರೆಂಟಿಸ್  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಶಿಪ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಅನುಸರಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​   ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಿ, ಬಳಿಕ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಅಪ್ರೆಂಟಿಸ್ ಟ್ರೈನಿಂಗ್ ಒಂದು ವರುಷಗಳ ಕಾಲ ಇರಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಟ್ರೈನಿಂಗ್  ನೀಡಲಾಗುತ್ತದೆ.

 ವೇತನಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​   ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/- ರಿಂದ 11,110/-ರೂಗಳ ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ:  ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​   ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

Leave a Reply

Your email address will not be published.