ಅಕ್ರವಾಮಗಿ ಮಾದಕ ವಸ್ತು ಮಾರುತ್ತಿದ್ದ ಆರೋಪಿ ಅರೆಸ್ಟ್: 60 ಕೆಜಿ 500 ಗ್ರಾಂ ತೂಕದ ಗಾಂಜಾ ವಶ

ಅಪರಾಧ

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಆಕ್ರವಾಮಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 60 ಕೆಜಿ 500 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಆರೋಪಿಗಳ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಈ ಆರೋಪಿ ನಗರದ ಹಲವು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ.

Leave a Reply

Your email address will not be published.