
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ
ನವದೆಹಲಿ: ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರಿಗೆ ಸಂಸತ್ತಿನಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಇಂದು ಪ್ರಮಾಣವಚನ ಬೋಧಿಸಿದರು. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿದ ದೇಶದ ಎರಡನೇ ಮತ್ತು ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಮುರ್ಮು ಪಾತ್ರರಾದರು. ಇದಲ್ಲದೇ, 1947 ರ ಬಳಿಕ ಜನಿಸಿದವರಲ್ಲಿ ರಾಷ್ಟಪತಿಯಾದ ಮೊದಲಿಗರಾಗಿದ್ದಾರೆ.
ಸಂಸತ್ತಿನಲ್ಲಿ ಹಮ್ಮಿಕೊಂಡಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು.