ಅಕ್ರಮವಾಗಿ ರಕ್ತ ಚಂದನವನ್ನು ಸಾಗಾಟಕ್ಕೆ ಯತ್ನ: ಕಸ್ಟಮ್ಸ್ ಅಧಿಕಾರಿಗಳಿಂದ ಆರೋಪಿಗಳು ಅರೆಸ್ಟ್

ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಅಕ್ರಮವಾಗಿ ರಕ್ತ ಚಂದನವನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಧಿಕಾರಿಗಳ ಕಣ್ತಪ್ಪಿಸಲು ಖತರ್ನಾಕ್ ಪ್ಲಾನ್ ಮಾಡಿಕೊಂಡು ಬಂದಿದ್ದ ಖದೀಮರು, ಪ್ಲೈವುಡ್ ಶೀಟ್​ಗಳಲ್ಲಿ ಪ್ಯಾಕ್ ಮಾಡಿ ಅನುಮಾನ ಬಾರದಂತೆ ವುಡ್ ಫರ್ನಿಚರ್ ಎಂದು ಹೇಳಿ ಅಕ್ರಮ ಸಾಗಾಟಕ್ಕೆ ಪ್ರಯತ್ನಪಟ್ಟಿದ್ದರು.  ಬೆಂಗಳೂ ರಿನಿಂದ ತೈವಾನ್​ಗೆ ವೈಟ್ ಫಿಲ್ಡ್ ಬಳಿಯ ಕಾರ್ಗೋ ಮೂಲಕ ಸಾಗಾಟ ಮಾಡಲು ಯತ್ನಿಸಿದಾಗ  ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇನ್ನೂ ಆರೋಪಿಗಳಿಂದ ಸುಮಾರು 2.4 ಕೋಟಿ ರೂ ಮೌಲ್ಯದ ರಕ್ತಚಂದನವನ್ನು ವಶಪಡಿಸಿಕೊಂಡಿದ್ದು, ಇವರು ತೈವಾನ್‌ಗೆ ಸಾಗಿಸಲು ಯತ್ನಿಸಿದ್ದರು ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದು, ಇನ್ನೂ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ

Leave a Reply

Your email address will not be published.