ಉಕ್ರೇನ್ ನಲ್ಲಿರುವ ರಸ್ತೆ ಮಾರ್ಗದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಪ್ರಯತ್ನ: CM ಬೊಮ್ಮಾಯಿ

ಬೆಂಗಳೂರು

ಬೆಂಗಳೂರು: ಉಕ್ರೇನ್ ನಲ್ಲಿ ಸಿಕ್ಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳು ನಮ್ಮ ರಾಯಭಾರಿ ಕಚೇರಿ ಅಧಿಕಾರಿಗಳ ಸಂಪರ್ಕದಲ್ಲಿ ಇದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾನು ಇವತ್ತು‌ ನಮ್ಮ ವಿದೇಶಾಂಗ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ಸಂಪೂರ್ಣ ವಿವರಗಳನ್ನು ಅವರು ಪಡೆದುಕೊಂಡಿದ್ದಾರೆ. ಕರ್ನಾಟಕದ ಬಹಳಷ್ಟು ಮಕ್ಕಳು ಮೆಡಿಕಲ್ ಕಲಿಯಲು ಹೋಗಿದ್ದಾರೆ. ಆ ವಿದ್ಯಾರ್ಥಿಗಳು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅವರು ಸದ್ಯಕ್ಕೆ ಸುರಕ್ಷಿತ ಸ್ಥಳದಲ್ಲಿರಬೇಕು. ಭಾರತ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ ಎಂದರು. ಇನ್ನೂ ರಷ್ಯಾ ಭಾಷೆ ಮಾತಾಡುವ ರಾಯಭಾರಿಗಳನ್ನು ಉಕ್ರೇನ್ ಗೆ ಕಳುಹಿಸಿದ್ದಾರೆ. ಅಲ್ಲಿಂದ ವಿದ್ಯಾರ್ಥಿಗಳನ್ನು ರಸ್ತೆಯ ಮಾರ್ಗದಲ್ಲಿ ಸ್ಥಳಾಂತರ ಮಾಡುವ ಪ್ರಯತ್ನಗಳು ಆಗುತ್ತಿವೆ. ವಾಯು ಮಾರ್ಗದ ಮೂಲಕ ಸ್ಥಳಾಂತರ ಆಗುತ್ತಿಲ್ಲ. ಈ ಸಂಬಂಧ ವಿದೇಶಾಂಗ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ. ಉಕ್ರೇನಿನ ಪಶ್ಚಿಮ ಭಾಗದಲ್ಲಿರುವವ ರಸ್ತೆ ಮಾರ್ಗದ ಮೂಲಕ‌ ಸ್ಥಳಾಂತರ ಮಾಡಬಹುದೆಂಬ ಚಿಂತನೆ ನಡೆಯುತ್ತಿದೆ ಎಂದರು.

Leave a Reply

Your email address will not be published.