ಬಿಜೆಪಿ ಪಕ್ಷಕ್ಕೆ ಬಾಬು ಚಿಂಚನಸೂರ್ ಕೊಡುಗೆ ಅಪಾರ: ನಳಿನ್ ಕುಮಾರ್ ಕಟೀಲ್

ಬೆಂಗಳೂರು

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಬಾಬು ಚಿಂಚನಸೂರ್ ಕೊಡುಗೆ ಅಪಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಒಂದು ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದಾರೆ. ಅವರು ನೂರಕ್ಕೆ ನೂರು ಆಯ್ಕೆ ಆಗಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಚಿಂಚನಸೂರ್ ಕಾಂಗ್ರೆಸ್‍ನಲ್ಲಿದ್ದರು,

ಬಿಜೆಪಿ ಗೆಲ್ಲಲು ಆ ಭಾಗದಲ್ಲಿ ಕೆಲಸ ಮಾಡಿದ್ದರು. ಅವರ ಕೊಡುಗೆ ನಮ್ಮ ಪಕ್ಷಕ್ಕೆ ಅಪಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹೈಕಮಾಂಡ್ ನಾಯಕರ ಸೂಚನೆಯಂತೆ ಬಾಬೂರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದಾರೆ. ಚಿಂಚನಸೂರ್ ಅವರು ಮೊದಲು ಕಾಂಗ್ರೆಸ್ ನಲ್ಲಿ ಇದ್ದರು. ಸಚಿವರಾಗಿ ಕೆಲಸ ಮಾಡಿದ ಹಿರಿಯ ರಾಜಕಾರಣಿ. ಪಕ್ಷಕ್ಕಾಗಿ ಐದಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕಟೀಲ್ ಹೇಳಿದರು.

Leave a Reply

Your email address will not be published.