ತುರ್ತು ಕಾಮಗಾರಿ ಹಿನ್ನೆಲೆ: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂ ಸಿಬ್ಬಂದಿಗಳು ತುರ್ತು ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ನಗರದ ಬಹುತೇಕ ಏರಿಯಾಗಳಲ್ಲಿ ಪವರ್ ಕಟ್ ಇರಲಿದ್ದು, ಅದರಂತೆ ಬೆಂಗಳೂರಿನ ಇಸ್ರೋ ಲೇಔಟ್, ಜಯನಗರ 8ನೇ ಬ್ಲಾಕ್, ಬಸವೇಶ್ವರ ನಗರ, ಟೀಚರ್ಸ್ ಕಾಲೋನಿ, ಬೊಮ್ಮನಹಳ್ಳಿ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  ಇನ್ನೂ ಹಲವು ದಿನಗಳಿಂದ ಕಾಮಗಾರಿ ನೆಪದಲ್ಲಿ ಬೆಸ್ಕಾಂ ಸಿಬ್ಬಂದಿಗಳು ಪವರ್ ಕಟ್ ಮಾಡುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿ ಹೋಗಿದ್ದಾರೆ.

Leave a Reply

Your email address will not be published.