Bangalore accident..ಬೆಂಗಳೂರಿನಲ್ಲಿ ಭೀಕರ ಅಪಘಾತ: CCTV ಯಲ್ಲಿ ದೃಶ್ಯ ಸೆರೆ

ಬೆಂಗಳೂರು

ಬೆಂಗಳೂರು: ವೇಗವಾಗಿ ಬಂದ ಹೋಂಡಾ ಸಿಟಿ ಕಾರು ನಿಯಂತ್ರಣ ತಪ್ಪಿ ಪಲ್ಟಿ ಆಗಿರುವ ಘಟನೆ ಕೊಮ್ಮಘಟ್ಟ ರಸ್ತೆಯಲ್ಲಿ ನಡೆದಿದೆ. ವೇಗವಾಗಿ ಬಂದ ಹೋಂಡಾ ಸಿಟಿ ಕಾರು ನಿಯಂತ್ರಣ ತಪ್ಪಿ ಕೆಂಗೇರಿ ಯಿಂದ ತಾವರೆಕೆರೆ ಸಂಪರ್ಕ ಕಲ್ಪಿಸುವ ಕೊಮ್ಮಘಟ್ಟ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಬಂಡೇಮಠ ಆರ್ಚ್ ಬಳಿ ಪುಟ್ಪಾತ್ ಮೇಲೆ ಹತ್ತಿ ಕಾರು ಪಲ್ಟಿಯಾಗಿದ್ದು,

ಅದೃಷ್ಟವಶಾತ್ ಅಪಘಾತದ ವೇಳೆ ಫುಟ್ಪಾತ್ ಮೇಲೆ ಯಾರು ಇರದೇ ಭಾರೀ ಅನಾಹುತ ತಪ್ಪಿದೆ. ಇನ್ನೂ ಘಟನೆ ಹಿನ್ನೆಲೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಸಂಚಾರಿ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Leave a Reply

Your email address will not be published.