Bangalore Crime.. ಹ್ಯಾಂಡಲ್ ಲಾಕ್ ಮುರಿದು ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿಗಳು ಅರೆಸ್ಟ್..!

ಅಪರಾಧ ಬೆಂಗಳೂರು

ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಸನ್ನ ಕುಮಾರ್ ಅಲಿಯಾಸ್ ಗಬ್ಬರ್  ಹಾಗೂ ಭರತ ಅಲಿಯಾಸ್ ಕರಿ ಭರತ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು, ರಾತ್ರಿ ವೇಳೆ ಮನೆಯ ಮುಂದೆ ನಿಲ್ಲಿಸಿದ ಬೈಕ್ ಗಳ ಹ್ಯಾಂಡಲ್ ಲಾಕ್ ಮುರಿದು ಕ್ಷಣಮಾತ್ರದಲ್ಲಿ ಬೈಕ್ ಕದ್ದು ಎಸ್ಕೇಪ್ ಆಗುತ್ತಿದ್ದರು.

ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಬಂಧಿತರಿಂದ 6 ಬೈಕ್ ,ಒಂದು ಬೊಲೆರೋ ಕಾರ್ ವಶಕ್ಕೆ ಪಡೆಯಲಾಗಿದೆ. ಇನ್ನೂ ಆರೋಪಿಗಳ ಬಂಧನದಿಂದ 7 ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.