ಬೆಂಗಳೂರಿನ ಮನೆಗಳನ್ನು ಟಾರ್ಗೆಟ್ ಮಾಡಿ ಚಿನ್ನ ಕದಿಯುತ್ತಿದ್ದ ಆರೋಪಿ ಅರೆಸ್ಟ್..!

ಬೆಂಗಳೂರು

ಬೆಂಗಳೂರು: ಚಿನ್ನಾ ಕಳವು ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನವಾಜ್ ಶರೀಫ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಹಗಲು, ರಾತ್ರಿ ಚಿನ್ನಾ ಕಳವು ಮಾಡ್ತಿದ್ದ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೂ ಬಂಧಿತನಿಂದ 5 ಲಕ್ಷದ 10 ಸಾವಿರ ಮೌಲ್ಯದ 102ಗ್ರಾಂ ಚಿನ್ನಾಭರಣ, ಹಾಗೂ 1 ಲಕ್ಷದ 50 ಸಾವಿರ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನ ಹೆಚ್ಚಿನ ತನಿಖೆಗೆ ಒಳಪಡಿಸಿರುವ ಪೊಲೀಸರು, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.