ಬೆಂಗಳೂರಿಗೆ NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ಬೆಂಗಳೂರು

ಬೆಂಗಳೂರು: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುರ್ಮು ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ.

ಮಧ್ಯಾಹ್ನ 3.30 ರ ಸುಮಾರಿಗೆ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದ್ರೌಪದಿ ಮುರ್ಮು ಅವರು ವಸಂತನಗರದಲ್ಲಿರುವ ಖಾಸಗಿ ಹೋಟೆಲ್ ಗೆ ತೆರಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಶಾಸಕರು ಮತ್ತು ಸಚಿವರೊಂದಿಗೆ ದ್ರೌಪದಿ ಮುರ್ಮು ಅವರು ಸಭೆ ನಡೆಸಲಿದ್ದು,ತಮಗೆ ಮತ ನೀಡುವಂತೆ ಮನವಿ ಮಾಡಲಿದ್ದಾರೆ

ದ್ರೌಪದಿ ಮುರ್ಮು ಅವರ ಸ್ವಾಗತಕ್ಕೆ ರಾಜ್ಯ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದ್ದು, ವಿವಿಧ ಆದಿವಾಸಿ ಕಲಾ ತಂಡಗಳು ಮುರ್ಮು ಅವರನ್ನು ಸ್ವಾಗತಿಸಿವೆ. ಇನ್ನು ಸಭೆಯಲ್ಲಿ  ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸೇರಿದಂತೆ ರಾಜ್ಯದ ಎಲ್ಲಾ ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದಾರೆ.

ಬಿಜೆಪಿ ಶಾಸಕರೊಂದಿಗಿನ ಸಭೆಯ ಬಳಿಕ ದ್ರೌಪದಿ ಮುರ್ಮು ಅವರು ಸಂಜೆ 6.30 ಕ್ಕೆ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ನಿವಾಸಕ್ಕೆ ಭೇಟಿ ನೀಡಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ.

Leave a Reply

Your email address will not be published.