ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್ ನೀಡಿದ BBMP

ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಕ್ ನೀಡಿದೆ. ಇನ್ನುಂದೆ ವಾಹನ ದಟ್ಟಣೆ ಇರೋ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ನಡೆಸುವ ವ್ಯಾಪಾರಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಮುಂದಾಗಿದೆ.

ಮುಖ್ಯ ರಸ್ತೆ & ಆರ್ಟಿರಿಯಲ್ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವಿಗೆಪಾಲಿಕೆಮುಂದಾಗಿದೆಪಾಲಿಕೆಯ ಈ ನಿರ್ಧಾರಕ್ಕೆ ಬೀದಿ ಬದಿ ವ್ಯಾಪಾರಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಪ್ರಮುಖ ರಸ್ತೆಗಳ ಫುಟ್ ಪಾತ್ ಮೇಲೆ ತಳ್ಳು ಗಾಡಿಯಲ್ಲಿ ವ್ಯಾಪಾರ ಮಾಡುತ್ತಿರೋದರಿಂದ ಜನರಿಗೆ ಸಮಸ್ಯೆ ಉಂಟಾಗ್ತಿದೆ.

ಇದರಿಂದ ಜನರು ರಸ್ತೆ ಮೇಲೆ ಸಂಚರಿಸುತ್ತಿರೋದರಿಂದ ಅಪಘಾತಗಳು ಉಂಟಾಗುತ್ತಿವೆ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಅಪಘಾತಗಳನ್ನು ತಪ್ಪಿಸಲು ಮುಖ್ಯ ರಸ್ತೆಗಳ ಬದಿಗಳಲ್ಲಿ ವ್ಯಾಪಾರದ ಮೇಲೆ ನಿರ್ಬಂಧ ಹಾಕಲು ಬಿಬಿಎಂಪಿ ಯೋ ಜಿಸಿದೆ. ನಗರ ಪೊಲೀಸ್ ಇಲಾಖೆಯ ಜೊತೆ ನಡೆದ ಸಭೆಯಲ್ಲಿ ಬಿಬಿಎಂಪಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ  ಆಯುಕ್ತ ತುಷಾರ್ ಗಿರಿನಾಥ್ ಸಹ ಮಾಹಿತಿ ನೀಡಿದ್ದಾರೆ. ಟ್ರಾಫಿಕ್ ಪೊಲೀಸರ ಸಲಹೆ, ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಡಿಮೆ ದಟ್ಟಣೆ ಇರೋ ರಸ್ತೆ ಅಥವಾ ಪಾರ್ಕ್ ಬದಿ ತಳ್ಳು ಗಾಡಿಯಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ. ಪ್ರಮುಖ  ಬೀದಿಗಳಲ್ಲಿಯೇ ಹೆಚ್ಚು ವ್ಯಾಪಾರ ಆಗುತ್ತದೆ. ದಿಢೀರ್ ಅಂತ ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಹೇಳಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ. ಈ ವ್ಯಾಪಾರವನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದೇವೆ. ಕೊರೊನಾ ಬಂದ ನಂತರ ನಮ್ಮ ಆರ್ಥಿಕ ಪರಿಸ್ಥಿತಿ ಸಹ ಸರಿ ಇಲ್ಲ. ಈ ನಡುವೆ ರಸ್ತೆ ಬದಿ ವ್ಯಾಪಾರ ಮಾಡೋದು ಬೇಡ ಅಂದ್ರೆ ಹೇಗೆ ಎಂದು ವ್ಯಾಪಾರಸ್ಥರು ಪ್ರಶ್ನೆ ಮಾಡುತ್ತಿದ್ದಾರೆ.

Leave a Reply

Your email address will not be published.