ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಧ್ವಜಾರೋಹಣ

ಬೆಂಗಳೂರು

75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಆಡಾಳಿತಾಧಿಕಾರಿ  ರಾಕೇಶ್ ಸಿಂಗ್ ಅವರಿಂದ ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದ್ದಾರೆ. ಇನ್ನೂ ಕಾರ್ಯಕ್ರಮದಲ್ಲಿ ವಿಶೇಷ ಆಯುಕ್ತರಾದ ರವೀಂದ್ರ, ತ್ರೀಲೋಕ್ ಚಂದ್ರ, ಹರೀಶ್ ಕುಮಾರ್, ಜಯರಾಮ್ ರಾಯ್ ಪುರ, ಬಿಬಿಎಂಪಿ ಸಿಬ್ಬಂದಿ ಗಳು ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನೂ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆ ಜಾಗೃತಿ ಜಾತಗೆ ಬಿಬಿಎಂಪಿ ಅಧಿಕಾರಿಗಳು ಚಾಲನೆ ನೀಡಿದ್ದು, ಬಿಬಿಎಂಪಿ ಕೇಂದ್ರ ಕಚೇರಿಯಿಂದ ಲಾಲ್ ಬಾಗ್ ವರೆಗೂ ಜಾಥಾ ನಡೆಯಲಿದೆ. ಜಾಗೃತಿ ಜಾಥದಲ್ಲಿ ನೂರಾರು ಬಿಬಿಎಂಪಿ ಸಿಬ್ಬಂದಿಗಳು, ಅಧಿಕಾರಿ ವರ್ಗ ಭಾಗಿಯಾಗಿದ್ದಾರೆ.

Leave a Reply

Your email address will not be published.