BBMP ವಾರ್ಡ್ ವಿಂಗಡಣೆಯಲ್ಲಿ ತಾರತಮ್ಯ: ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಬೆಂಗಳೂರು

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‌ಗಳ ರಚನೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋ ಪಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎಸ್. ಇಸ್ಮಾಯಿಲ್ ಜಬೀವುಲ್ಲಾ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಸೀಮಾ ನಿರ್ಣಯ ಆಯೋಗದ ಅಧ್ಯಕ್ಷರು, ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ರಾಜ್ಯ ಚುನಾವಣಾ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

ಚಾಮರಾಜ ಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಬಿಎಂಪಿ ವಾರ್ಡ್ ಗಳ ರಚನೆಯಲ್ಲಿ ತಾರತಮ್ಯ ಎಸೆಗಲಾಗಿದೆ. ಗೋವಿಂದ ರಾಜ ನಗರ , ಪದ್ಮನಾಭ ನಗರ, ವಿಧಾನ ಸಭಾ ಕ್ಷೇತ್ರದ ಪ್ರತಿ ವಾರ್ಡ್ ಗೆ ಸರಾಸರಿ 30 ಸಾವಿರ ಜನಸಂಖ್ಯೆ ನಿಗದಿಪಡಿಸಿದ್ದಲ್ಲದೆ, ವಾರ್ಡ್ ಗಳ ಸಂಖ್ಯೆ ಹೆಚ್ಚಿಸ ಲಾಗಿದೆ. ಆದರೆ ಚಾಮರಾಜಪೇಟೆ ವಿಧಾನ ಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಪ್ರತಿ ವಾರ್ಡ್ 39 ಸಾವಿರ ಜನಸಂ ಖ್ಯೆ ನಿಗದಿಪಡಿಸಿ, ಹಿಂದೆ ಏಳು ಇದ್ದ ವಾರ್ಡ್ ಗಳ ಸಂಖ್ಯೆ 6ಕ್ಕೆ‌ ಇಳಿಸಲಾಗಿದೆ. ಪ್ರಸಿದ್ಧ ಕೆ.ಆರ್. ಮಾರ್ಕೆಟ್ ವಾರ್ಡ್ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

Leave a Reply

Your email address will not be published.