Home District ಕೃಷಿ ಸಚಿವ ಬಿ ಸಿ ಪಾಟೀಲ್ ಜಿಲ್ಲೆಯ ಜನರಲ್ಲಿ ಕೈ ಮುಗಿದು ಮನವಿ ಮಾಡಿಕೊಂಡಿದ್ದಾದರು ಏನು...

ಕೃಷಿ ಸಚಿವ ಬಿ ಸಿ ಪಾಟೀಲ್ ಜಿಲ್ಲೆಯ ಜನರಲ್ಲಿ ಕೈ ಮುಗಿದು ಮನವಿ ಮಾಡಿಕೊಂಡಿದ್ದಾದರು ಏನು ?

196
0
SHARE

ಹಾವೇರಿ. ಜಿಲ್ಲೆಯ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಿದ್ದು  ವ್ಯಾಪಕವಾಗಿ ಹಿರೆಕೇರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಹರಡುತ್ತಿದೆ.ಹೀಗಾಗಿ ಹಿರೆಕೇರೂರನ್ನು ಸೀಲ್ ಡೌನ್ ಮಾಡುವಂತೆ ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ. ಇಂದು ಮತ್ತೆ ಜಿಲ್ಲೆಯ ಹಲವೆಡೆ ಕೊರೊನಾ ಸೋಂಕು ಹೆಚ್ಚಾಗಿದ್ದು ರಾಜ್ಯ ಮತ್ತು ಜಿಲ್ಲಾಡಳಿತಕ್ಕೆ ತಮ್ಮ ಸ್ವಗೃಹದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊರನಾ ರೋಗದ ತೀವ್ರತೆಯನ್ನು ಜನರಿಗೆ ಮನವರಿಕೆ ಮಾಡಿದ ಅವರು ಕೊರೊನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್ ಧರಿಸುವುದರ ಜೊತೆಗೆ ಜನತೆ ಎಚ್ಚೆತ್ತುಕೊಳ್ಳುವಂತೆ ಜನತೆಗೆ  ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ.

ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ,ಕೋಡ,ಸುತ್ಕೋಟೆ,ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ಕೊರೊನಾ ವ್ಯಾಪಿಸಿದೆ.ಪ್ರತಿಯೊಬ್ಬರ ಜೀವ ಅವರವರ ಕೈಯಲ್ಲಿಯಿದೆ.ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು.ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ,ಜ್ವರ,ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು.ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು.ನಮ್ಮ ಜೀವಕ್ಕೆ‌ನಾವೇ ಹೊಣೆ.ಆದಷ್ಟು ಸುರಕ್ಷತಾ ಕ್ರಮ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here