Home District ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ; ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ; ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

392
0

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯವು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಏಳು ಮೂವತ್ತಕ್ಕೆ ನಡೆಯಲಿದೆ. ಕೋವಿಡ್-19 ಸೋಂಕಿನ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಕಾರಣ, ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು .144 ಅಡಿಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಾದ್ಯಂತ ನಿಷೇದಾಜ್ನೆಯನ್ನ ಜಾರಿಗೊಳಿಸಿದ್ದಾರೆ.

ಒಟ್ಟು 39 ವಾರ್ಡ್ ವಾರ್ಡ್ ಗಳ ಅಭ್ಯರ್ಥಿ ಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತ್ತು ವ್ಯಾಪ್ತಿಯ 03 ಕಿ.ಮೀ. ಪರದಿಯಲ್ಲಿ ಮಧ್ಯ ನಿಷೇಧ ಮಾಡಲಾಗಿದೆ ಇನ್ನೂ ಬಳ್ಳಾರಿ ನಗರದಾದ್ಯಂತ ಯಾವುದೇ ಕಾರಣಕ್ಕೂ ನಾಲ್ಕು ಜನಕ್ಕಿಂತ ಹೆಚ್ಚಿನ ಗುಂಪು ಸೇರಬಾರದು.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಯಾಗಲಿ ಅಥವಾ ಅವರ ಪ್ರತಿನಿಧಿಯಾಗಲಿ ಕೇವಲ ಒಬ್ಬರಿಗೆ ಮಾತ್ರ ಅಧಿಕೃತ ಪಾಸ್‍ನೊಂದಿಗೆ ಪ್ರವೇಶಕ್ಕೆ ಅವಕಾಶವಿರುತ್ತದೆ. ಚುನಾವಣೆಯಲ್ಲಿ ಗೆದ್ದವರು ಯಾವುದೇ ರೀತಿಯ ಸಂಭ್ರಮಾಚರಣೆ/ಮೆರವಣಿಗೆ ಮಾಡುವುದನ್ನು ನಿಷೇಧಿಸಿದೆ. ಅಲ್ಲದೆ, ಸಭೆ-ಸಮಾರಂಭ ಮಾಡುವುದನ್ನೂ ಸಹ ನಿಷೇಧಿಸಲಾಗಿದೆ

Previous articleಇಂದು ಚಾಮರಾಜನಗರ ಜಿಲ್ಲೆಯಲ್ಲಿ 377 ಮಂದಿ ಕೋರೊನಾ ದೃಢ; 2130ಕ್ಕೆ ಏರಿದ ಸಕ್ರಿಯ ಪ್ರಕರಣ
Next articleಶುಕ್ರವಾರ ಚಾಮರಾಜನಗರ ಜಿಲ್ಲೆಯಲ್ಲಿ 420 ಮಂದಿ ಕೋರೊನಾ ದೃಢ; 2312 ಸಕ್ರಿಯ ಪ್ರಕರಣ ದಾಖಲು

LEAVE A REPLY

Please enter your comment!
Please enter your name here