
ಮತ್ತೊಂದು ಕನ್ನಡ ಚಿತ್ರಕ್ಕೆ ಆಯ್ಕೆಯಾದ ಬಿಗ್ ಬಾಸ್ ಬೆಡಗಿ ದಿವ್ಯಾ ಸುರೇಶ್..! ಯಾವ ಚಿತ್ರ ಗೊತ್ತಾ..?
ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್, ಹಿರಣ್ಯ ಸಿನಿಮಾದ ವಿಶೇಷ ಪಾತ್ರಕ್ಕೆ ಸಹಿ ಮಾಡಿದ್ದಾರೆ. ರಾಜವರ್ಧನ್ ನಟನೆಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದಿವ್ಯಾ ನಿರ್ವಹಿಸುತ್ತಿರುವ ಪಾತ್ರವನ್ನು ಮಾರ್ಚ್ 9 ರಿಂದ ಚಿತ್ರೀಕರಿಸಲಾಗುವುದು ಎಂದಿದ್ದಾರೆ ನಿರ್ದೇಶಕ ಪ್ರವೀಣ್ ಅವ್ಯುಕ್ತ. ಸಿನಿಮಾ ನಾಯಕ ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರು ಆತ್ಮೀಯ ಸ್ನೇಹಿತರು. ಒಟ್ಟಿಗೆ ನಟಿಸುವ ಕನಸನ್ನು ಇಬ್ಬರೂ ಹೊಂದಿದ್ದರು. ಹಿರಣ್ಯ ಸಿನಿಮಾದ ಮೂಲಕ ಕನಸು ನನಸಾಗಿದೆ. ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದವರು ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾದಲ್ಲೂ ಅವರಿಗೆ ನಟಿಸುವ ಅವಕಾಶ ಸಿಕ್ಕಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ಮೂಡಿ ಬರಲಿದೆ.