Bigg Boss OTT.. ‘ಬಿಗ್ ಬಾಸ್ ಒಟಿಟಿ’ ಗೆ ಎಂಟ್ರಿಕೊಟ್ಟ ಆರ್ಯವರ್ಧನ್ ಗುರೂಜಿ, ಸೋನು ಶ್ರೀನಿವಾಸಗೌಡ

ಚಲನಚಿತ್ರ

‘ಬಿಗ್ ಬಾಸ್​ ಒಟಿಟಿ ಕನ್ನಡ’ ಸಾಕಷ್ಟು ಕುತೂಹಲ ಮೂಡಿಸಿದೆ. ಮೊದಲ ಸೀಸನ್ ಆದ್ದರಿಂದ ನಿರೀಕ್ಷೆಗಳು ಕೊಂಚ ಹೆಚ್ಚೇ ಇದೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಅವರು ‘ಬಿಗ್ ಬಾಸ್’ ಮನೆ ಸೇರಿದ್ದರು. ಈಗ ಎರಡನೇ ಸ್ಪರ್ಧಿಯ ಎಂಟ್ರಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಒಟಿಟಿಗೆ ಎಂಟ್ರಿ ನೀಡಿದ್ದಾರೆ. ಈ ಬಾರಿ ‘ಬಿಗ್ ಬಾಸ್​’ ಅನ್ನು ಒಟಿಟಿಯಲ್ಲಿ ಮಾತ್ರ ವೀಕ್ಷಿಸಬಹುದು.

ವೂಟ್ ಆ್ಯಪ್​​ನ ಚಂದಾದಾರರಾದರೆ ಮಾತ್ರ ‘ಬಿಗ್ ಬಾಸ್ ಒಟಿಟಿ’ ವೀಕ್ಷಣೆ ಸಾಧ್ಯ. ಇಲ್ಲವಾದರೆ, ನೀವು ‘ಬಿಗ್ ಬಾಸ್’ ನೋಡಲು ಆಗುವುದಿಲ್ಲ. ದಿನದ 24 ಗಂಟೆ ವೂಟ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ. ಈ ಮಧ್ಯೆ ಒಂದೊಂದಾಗಿ ಬಿಗ್​ ಬಾಸ್ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ.

Leave a Reply

Your email address will not be published.