
BMTC ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 2613 ಬಿಎಂಟಿಸಿ ಪ್ರಯಾಣಿಕರ ಮೇಲೆ ದಂಡ
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 2,613 ಪ್ರಯಾಣಿಕರನ್ನು ಪತ್ತೆ ಹಚ್ಚಿ ದಂಡ ವಸೂಲಿ ಮಾಡಲಾಗಿದೆ. ಜೂನ್ ತಿಂಗಳಲ್ಲಿ ಒಟ್ಟು 22,549 ಟ್ರಿಪ್ಗಳನ್ನು ತಪಾಸಣೆ ಮಾಡಲಾಗಿದ್ದು, 2,613 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ.4,27,620 ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1,268 ಪ್ರಕರಣಗಳನ್ನು ದಾಖಲಿಸಲಾಗಿದ
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 236 ಪುರುಷ ಪ್ರಯಾಣಿಕರಿಂದ ಒಟ್ಟು ರೂ.13,800ನ್ನು ದಂಡ ವಿಧಿಸಲಾಗಿದೆ.
ಆ ಮೂಲಕ ಒಟ್ಟಾರೆಯಾಗಿ ಜೂನ್ ತಿಂಗಳಲ್ಲಿ 2,751 ಪ್ರಯಾಣಿಕರಿಂದ ಒಟ್ಟು 4,41,420 ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.