
BREAKING.. ದುಷ್ಕರ್ಮಿಗಳಿಂದ ಘೋರ ಕೃತ್ಯ: ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ
ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿರುವ ಘಟನೆ ಕೆಂಗೇರಿಯ ರಾಮಸಂದ್ರದಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ಹೊಂದೆ ಮರದ ಕೆಳಗೆ ಮಹಿಳೆ ಅರೆಬರೆ ಸುಟ್ಟ ಮೃತದೇಹ ಪತ್ತೆಯಾಗಿದೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಪಶ್ಚಿಮ ವಿಭಾಗದ ಪ್ರಭಾರ ಡಿಸಿಪಿ ಡಾ. ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.