Home Home BSY ಉತ್ತರಕೊಡಿ.. ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು...

BSY ಉತ್ತರಕೊಡಿ.. ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು?

658
0
SHARE

ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ.

ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ಈ ಸರ್ಕಾರ ನೀಡುವುದು ಹೇಗೆ ಸಾಧ್ಯ? ಕಳೆದ ವರ್ಷದ  ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಕೇಳಿದ್ದು ರೂ.35,000 ಕೋಟಿ ಪರಿಹಾರ ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಪರಿಹಾರ ಕೇಳಲೂ ಭಯನಾ?

ಆಗಸ್ಟ್ನ್ ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ.

LEAVE A REPLY

Please enter your comment!
Please enter your name here