ನಾಳೆ ಸಂಜೆ ನಾಲ್ಕು ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವವರೆಗೂ ಯಾವುದೇ ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ…
ಶನಿವಾರ ಸಂಜೆ 4 ಗಂಟೆಗೆ ವಿಶ್ವಾಸಮತ ಯಾಚಿಸಲು ಸುಪ್ರೀಂ ಕೋರ್ಟ್ ಆದೇಶ ಇದು ಸುಪ್ರೀಂಕೋರ್ಟ್ನ ಐತಿಹಾಸಿಕ ಮಹತ್ವದ ತೀರ್ಪು ಎಂದು ಕಾಂಗ್ರೆಸ್-ಜೆಡಿಎಸ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರತಿಕ್ರಿಯಿಸಿದ್ದಾರೆ…
ಯಡಿಯೂರಪ್ಪ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಮತ್ತು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿದ್ದೆವು…
ವಿಧಾನಸಭೆಗೆ ಆಂಗ್ಲೊ ಇಂಡಿಯನ್ ಸದಸ್ಯರನ್ನು ನೇಮಕ ಮಾಡುವ ಸಂಬಂಧದ ರಾಜ್ಯಪಾಲರ ನಿರ್ಧಾರಕ್ಕೂ ಸುಪ್ರೀಂಕೋರ್ಟ್ ತಡೆ ನೀಡಿದೆ ಎಂದು ಸಿಂಘ್ವಿ ತಿಳಿಸಿದ್ದಾರೆ….
Home Elections 2019 BSY ಗೆ ಶಾಕ್ ಮೇಲೆ ಶಾಕ್ ಕೊಟ್ಟ ಸುಪ್ರೀಂ..?! “ಯಡಿಯೂರಪ್ಪ ಯಾವುದೇ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳುವಂತಿಲ್ಲ”…