ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭ: ವಿಧಾನಸೌಧದ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ

ರಾಜಕೀಯ

ಬೆಂಗಳೂರು: ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ವಿಧಾನಸೌಧದ ಸುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಲ್ ಪಂತ್ ಆದೇಶ ಹೊರಡಿಸಿ ದ್ದಾರೆ. ಬಜೆಟ್ ಅಧಿವೇಶನದ ಸಮಯದಲ್ಲಿ ವಿಪಕ್ಷಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ಕೈಗೊಳ್ಳುವ ಸಾಧ್ಯತೆ ಗೊಳಿರುತ್ತವೆ. ಆದ್ದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಧಿವೇಶನ ಆರಂಭವಾಗುವ ದಿನ ಬೆಳಗ್ಗೆ 6 ರಿಂದ ಮಧ್ಯರಾತ್ರಿ12 ಗಂಟೆವರೆಗೆ ಈ ನಿಷೇಧಾಜ್ಞೆ ಇರಲಿದೆ.

Leave a Reply

Your email address will not be published.