ಭಕ್ತರ ಸೋಗಿನಲ್ಲಿ ಬಂದವರಿಂದ ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಕೊಲೆ

ಜಿಲ್ಲೆ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ  ಗುರೂಜಿ ಚಂದ್ರಶೇಖರ್‌ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.

ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಗುರೂಜಿ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು.

ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‌ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.

Leave a Reply

Your email address will not be published.