ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..!

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 927 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 18,12,065 ಕ್ಕೆ ಏರಿಕೆ ಆಗಿದೆ. ನಿನ್ನೆ 750 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,88,855 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಕೋವಿಡ್ ಗೆ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳು 6,239 ಇದೆ. ಒಟ್ಟು ಕೋವಿಡ್ ಸಾವಿನ ಸಂಖ್ಯೆ 16,970ಕ್ಕೆ ಏರಿಕೆಯಾಗಿದೆ. ಅದರಂತೆ ರಾಜ್ಯದಲ್ಲಿ ನಿನ್ನೆ 27,535 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 989 ಮಂದಿಗೆ ಸೋಂಕು ದೃಢಪಟ್ಟಿದೆ.

802 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,31,263 ಮಂದಿ ಗುಣಮುಖರಾಗಿದ್ದಾರೆ. ನಿನ್ನೆಯ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ ಪ್ರಕರಣಗಳು 6,693 ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published.