ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ: ಮಾಜಿ ಸಚಿವ ಈಶ್ವರಪ್ಪ ಎಚ್ಚರಿಕೆ

ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ ಮಾತನಾಡಿದ ಅವರು, ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ. ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ ಕೊಡಲ್ವಾ? ನಮ್ಮ ಹಬ್ಬದ ತಂಟೆಗೆ ಬರಬೇಡಿ ಎಂದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನೂ ನಿನ್ನೆ ಬೆಳಗ್ಗೆ ಸರ್ಕಾರಿ ಕಾರ್ಯಕ್ರಮ ಕೂಡ ಯಶಸ್ವಿಯಾಯ್ತು. ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮ ಕೂಡ […]

Continue Reading

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ: ಸಿಎಂ ಬೊಮ್ಮಾಯಿ ಘೋಷಣೆ

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ 2ರಷ್ಟು ಮೀಸಲಾತಿ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ವಿಜೇತರಿಗೆ ಸನ್ಮಾನ ಮತ್ತು ಕ್ರೀಡಾಪಟುಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲರಿಗೂ, ಕ್ರೀಡಾ ಮನೋಭಾವ ಇರಬೇಕು ಎಂಬ ಮಾತಿದೆ. ಕ್ರೀಡಾ ಮನೋಭಾವದಿಂದ ಡಿಸಿಪ್ಲಿನ್ ಬರಲಿದೆ. ಡಿಸಿಪ್ಲೇನ್​ನಿಂದ ಕ್ಯಾರೆಕ್ಟರ್ ಬರಲಿದೆ ಎಂದರು. ಉತ್ತಮ ನಡತೆ ಮಾಡಿಕೊಳ್ಳುವುದು ಮುಖ್ಯ. ಆಗ ಜೀವನದಲ್ಲಿ ಖುಷಿಯಾಗಿ ಇರಬಹುದು ಎಂದರು ಸರ್ಕಾರ ಏನು ಮಾಡಬೇಕು ಎಂದು ನೀವು ಹೇಳುತ್ತೀರೋ ಹಾಗೆಯೇ […]

Continue Reading

ಈ ಕಾರಣಕ್ಕಾಗಿ ಬೆಂಗಳೂರಿನ ವಿದ್ಯಾರ್ಥಿ ಕೊಲೆ: ಪೊಲೀಸರ ತನಿಖೆಯಲ್ಲಿ ಅಸಲಿ ಕಾರಣ ಬಯಲು

ಕೆಜಿ ಹಳ್ಳಿಯಲ್ಲಿ ವಿದ್ಯಾರ್ಥಿ ಅರ್ಬಾಜ್ ಕೊಲೆ ಮಾಡಿದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಕಳೆದ ಆಗಸ್ಟ್ 12 ರಂದು ಕಾಲೇಜ್ ಫೆಸ್ಟ್ ವೇಳೆ ದುಷ್ಕರ್ಮಿಗಳು ಅರ್ಬಾಜ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ತನಿಖೆ ಕೈಗೊಂಡಿದ್ದ ಕೆಜಿಹಳ್ಳಿ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಸಾದ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಒಟ್ಟು 7 ಜನ ವಿದ್ಯಾರ್ಥಿಗಳು ಭಾಗಿಯಾಗಿದ್ದು, ಇನ್ನುಳಿದವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಇನ್ನೂ ಮೃತ […]

Continue Reading

ಕಾಂಗ್ರೆಸ್ ಸ್ವತಂತ್ರ ನಡಿಗೆ ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್‌ ಪಕ್ಷದಿಂದ ‘ಸ್ವಾತಂತ್ರ್ಯ ನಡಿಗೆ’ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ. ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ತನಕ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಸೇರಿ ಕಾಂಗ್ರೆಸ್ ನಾಯಕರ ದಂಡು […]

Continue Reading

ಸ್ವಾತಂತ್ರ್ಯ ದಿನಾಚರಣೆ: ನಿನ್ನೆ ದಾಖಲಾದ ಕೊರೊನಾ ಸಂಖ್ಯೆ ಎಷ್ಟು ಗೊತ್ತಾ?

ಬೆಂಗಳೂರಿನಲ್ಲಿ ನಿನ್ನೆ 870 ಮಂದಿಗೆ ಕೋವಿಡ್ ಸೋಂಕು ತಗುಲಿದೆ. 1,198 ಮಂದಿ ಬಿಡುಗಡೆಯಾಗಿದ್ದಾರೆ. ರಾಜಧಾನಿಯಲ್ಲಿ 6,951 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಕೋವಿಡ್ ಸಾವಿನ ಸಂಖ್ಯೆ 16,978 ಇದೆ. ಅದರಂತೆ ರಾಜ್ಯದಲ್ಲಿ ನಿನ್ನೆ 12,533 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,206 ಜನರಿಗೆ ಸೋಂಕು ದೃಢಪಟ್ಟಿದೆ. 1653 ಮಂದಿ ಗುಣಮುಖರಾಗಿದ್ದಾರೆ. ನಿನ್ನೆಯ ಕೋವಿಡ್ ಸಾವಿನ ಸಂಖ್ಯೆ ಶೂನ್ಯ, ಸಕ್ರಿಯ ಪ್ರಕರಣಗಳು 10,475ಕ್ಕೆ ಏರಿಕೆಯಾಗಿದೆ.   ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 9.62, ವಾರದ ಸೋಂಕಿತರ ಪ್ರಮಾಣ ಶೇ. […]

Continue Reading

ವಂದೇ ಮಾತರಂ ಹಾಡಿ ಸ್ವತಂತ್ರ್ಯ ದಿನದ ಶುಭಾಶಯ ತಿಳಿಸಿದ ಐಪಿಎಸ್ ಅಧಿಕಾರಿ ಡಿ. ರೂಪ- Video

76 ನೇ ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ತಿಳಿಸಲು ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು, ಶೇರ್​ ಮಾಡಿದ ಕೆಲವೇ ಸಮಯದಲ್ಲಿ ಸಾವಿರಾರು ಜನ ವೀಕ್ಷಣೆ ಮಾಡಿದ್ದಾರೆ. ಇವರು ಹಾಡಿರುವ ಹಾಡಿನ ವಿಡಿಯೋವನ್ನು ಪಿಕೆ ಶಾನ್ ಅವರು ಎಡಿಟ್ ಮಾಡಿದ್ದು ಇದಕ್ಕೆ ಹಿನ್ನಲೆ ಸಂಗೀತವನ್ನು ಕೂಡ ಜೋಡಿಸಿದ್ದಾರೆ. ಈ ಮೂಲಕ ಡಿ. […]

Continue Reading

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ; 10 ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಣೆ

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಲಿಕಾನ್ ಸಿಟಿ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದ ಕಡೆಯ ದಿನವಾದ ನಿನ್ನೆ ಜನರು ಮುಗಿಬಿದ್ದು ವೀಕ್ಷಿಸಿದರು. ಅನೇಕರು ಮಕ್ಕಳೊಂದಿಗೆ ಕುಟುಂಬಸಮೇತರಾಗಿ ಆಗಮಿಸಿದ್ದರು. ಸರ್ಕಾರಿ ರಜೆ ಮತ್ತು ಕೊನೆಯ ದಿನವಾದ ಕಾರಣಕ್ಕೆ ಫ್ಲವರ್ ಶೋ ತುಂಬಿ ತುಳುಕುತ್ತಿತ್ತು. ಡಾ.ರಾಜ್ ಕುಮಾರ್ ಅವರ ಗಾಜನೂರು ಮನೆ, ಪುನೀತ್ ನಡೆಸುತ್ತಿದ್ದ ಆಶ್ರಮ ಈ ಸಲದ ಫ್ಲವರ್ ಶೋ ವಿಶೇಷತೆಯಾಗಿದೆ. ಈ ಎರಡು ಕಟ್ಟಡಗಳ ಪ್ರತಿಕೃತಿಯನ್ನು ಸಂಪೂರ್ಣವಾಗಿ […]

Continue Reading

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಧ್ವಜಾರೋಹಣ

75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಆಡಾಳಿತಾಧಿಕಾರಿ  ರಾಕೇಶ್ ಸಿಂಗ್ ಅವರಿಂದ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದ್ದಾರೆ. ಇನ್ನೂ ಕಾರ್ಯಕ್ರಮದಲ್ಲಿ ವಿಶೇಷ ಆಯುಕ್ತರಾದ ರವೀಂದ್ರ, ತ್ರೀಲೋಕ್ ಚಂದ್ರ, ಹರೀಶ್ ಕುಮಾರ್, ಜಯರಾಮ್ ರಾಯ್ ಪುರ, ಬಿಬಿಎಂಪಿ ಸಿಬ್ಬಂದಿ ಗಳು ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನೂ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆ ಜಾಗೃತಿ ಜಾತಗೆ ಬಿಬಿಎಂಪಿ ಅಧಿಕಾರಿಗಳು ಚಾಲನೆ […]

Continue Reading

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದ ಎಸಿ ಶಿವಣ್ಣ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನಡೆದಿದೆ. ಎಸಿ ಶಿವಣ್ಣ ಅವರು ಇಂದು ಧ್ವಜಾರೋಹಣ ನೇರವೇರಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯು ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದೆ. ಎಸಿ ಶಿವಣ್ಣ, ಜಮ್ಮೀರ್ ಅಹಮ್ಮದ್, MP ಪಿಸಿ ಮೋಹನ್ ಧ್ವಜಾರೋಹಣ ವೇದಿಕೆಯಲ್ಲಿ ಉಪಸ್ಥಿತರಾಗಿದ್ದರು. ಎಸಿ ಶಿವಣ್ಣ ಚಾಮರಾಜಪೇಟೆ ಮೈದಾನದಲ್ಲಿ‌ ಧ್ವಜಾರೋಹಣ ನೇರವೇರಿಸಿದ್ದು, ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಿದೆ. ಇನ್ನೂ ಸ್ವಾತಂತ್ರ್ಯೋತ್ಸವ, ಗಣೇಶ […]

Continue Reading

75 ನೇ ಸ್ವಾತಂತ್ರ್ಯ ದಿನಾಚರಣೆ: ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿ.ಎಂ

75 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು. ಕಿತ್ತೂರುರಾಣಿ ಚೆನ್ನಮ್ಮ, ರಾಯಣ್ಣರನ್ನು ಮರೆಯುವಂತಿಲ್ಲ. ನಾನು ಜಿಲಿಯನ್ […]

Continue Reading