ರಾಷ್ಟ್ರಧ್ವಜಕ್ಕೆ BJP ನಾಯಕರಿಂದ ಅವಮಾನ: ರಾಷ್ಟ್ರಧ್ವಜದ ಬ್ಯಾಡ್ಜ್ ಉಲ್ಟಾ ಧರಿಸಿದ ಕಮಲ ನಾಯಕರು

ಬೆಂಗಳೂರು : 75ನೇ ಸ್ವಾತಂತ್ರ್ಯ ಮಹೋತ್ಸವದಲ್ಲಿ ಸಚಿವರ ಮಹಾ ಎಡವಟ್ಟಾಗಿದ್ದು, ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕೆ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ. ನಗರದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ABVP ಧ್ವಜ ಹಾರಾಟ ಮಾಡಿದ್ದು, ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸುವ ಹಾಗಿಲ್ಲ. ಸಚಿವರ ಈ ಕಾರ್ಯಕ್ಕೆ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷರು, ಸಚಿವರಿಂದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇನ್ನು, ಕೆ.ಆರ್.ಪುರಂನಲ್ಲಿ ಕಟೀಲ್​ ಹಾಗೂ ಸಚಿವ ಬೈರತಿ ಬಸವರಾಜ್​ರಿಂದ ಅಪಮಾನ ಆಗಿದ್ದು, ರಾಷ್ಟ್ರಧ್ವಜದ ಬ್ಯಾಡ್ಜ್ ಅನ್ನು ಕಮಲ […]

Continue Reading

ಬಿಜೆಪಿಯವರ ಹರ್ ಘರ್ ತಿರಂಗ ಕೇವಲ ನಾಟಕವಷ್ಟೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹರ್ ಘರ್ ತಿರಂಗ ಅಭಿಯಾನ ನಾಟಕ, ಕೇವಲ ಲೂಟಿಯೇ ಬಿಜೆಪಿ ಕೊಡುಗೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಸಂಬಂಧ ಸರ್ವಜ್ಞ ನಗರದಲ್ಲಿ ಮಾತನಾಡಿದ ಅವರು, ಇಂದು ನಾವೆಲ್ಲ ಸ್ವತಂತ್ರ್ಯರಾಗಿದ್ದೇವೆ. ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಕಾರಣ. ದೇಶಕ್ಕಾಗಿ ಸಾವಿರಾರು ಜನ ಪ್ರಾಣ ತ್ಯಾಗ ಮಾಡಿದ್ದಾರೆ. ಆ.15ರಂದು 75ನೇ ಸ್ವಾತಂತ್ರೋತ್ಸವದ ನಡಿಗೆ ಹಮ್ಮಿಕೊಂಡಿದ್ದೇವೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಬೆಂಗಳೂರು ಸೇರಿದಂತೆ ಬೇರೆ ಬೇರೆ ಭಾಗದ ಜನರು ಭಾಗವಹಿಸಲಿದ್ದಾರೆ ಎಂದರು. ಇನ್ನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡುತ್ತಿರೋದು ಕಾಂಗ್ರೆಸ್. […]

Continue Reading

ACB ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸ್ತಾರೆ ಎಂಬ ನಂಬಿಕೆ ನನಗಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸ್ತಾರೆ ಎಂಬ ನಂಬಿಕೆ ನನಗಿಲ್ಲ ಎಂದು ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕುರಿ ಕಾಯುವುದಕ್ಕೆ ತೋಳ ಬಿಡ್ತಾರೆ ಅಂತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ವ್ಯವಸ್ಥೆ ಶುದ್ಧವಾಗುತ್ತದೆ ಎಂದು ನಾನು ಭಾವಿಸಿಲ್ಲ. ಮೊದಲು ವಿಧಾನಸೌಧದ 3ನೇ ಮಹಡಿ ಶುದ್ಧವಾಗಬೇಕೆಂದು ಸರ್ಕಾರವನ್ನು ಟೀಕಿಸಿದರು. ಕಾಂಗ್ರೆಸ್ ಸರ್ಕಾರದ ಅವಧಿಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಅನೇಕ‌ ಆರೋಪಗಳನ್ನು ತೆಗೆದು ಹಾಕಲು ಈ ಸಂಸ್ಥೆಯನ್ನು […]

Continue Reading

ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್: ಮಾಜಿ ಸಿಎಂ SM ಕೃಷ್ಣ ಹೇಳಿದ್ದೇನು..?

ಬೆಂಗಳೂರು: ಎಸಿಬಿ ರದ್ದು ಪಡಿಸಿ ಲೋಕಾಯುಕ್ತ ಸಂಸ್ಥೆಗೆ ಬಲ ನೀಡಿದ ನ್ಯಾಯಾಲಯದ ತೀರ್ಪನ್ನು ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಸ್ವಾಗತಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಸ್​ಎಂ ಕೃಷ್ಣ ಅವರು, ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರಾರಂಭಗೊಂಡು ನಾನು ಮುಖ್ಯಮಂತ್ರಿಗಳಾಗಿದ್ದಾಗ, ದಿ. ನ್ಯಾಯಮೂರ್ತಿ ಎನ್ ವೆಂಕಟಾಚಲ ಅವರು ಮತ್ತು ನ್ಯಾ. ಸಂತೋಷ ಹೆಗ್ಡೆ ಪರಿಶ್ರಮದಿಂದ ಲೋಕಾಯುಕ್ತ ಸಂಸ್ಥೆ ದೇಶದ ಗಮನ ಸೆಳೆದಿತ್ತು. ಕಳೆದ ತಿಂಗಳು ಹೈಕೋರ್ಟ್ ಎಸಿಬಿಯಲ್ಲಿನ ಭ್ರಷ್ಟ ವ್ಯವಸ್ಥೆ ಬಗ್ಗೆ ಬಲವಾದ ಛಾಟಿ […]

Continue Reading

ವೈರಲ್ ಆಯ್ತು ವಿಮಾನದೊಳಗೆ ಸಿಗರೇಟ್ ಸೇದುತ್ತಿರುವ ವಿಡಿಯೋ: ಸಿಂಧಿಯಾಗೆ ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ನವದೆಹಲಿ: ಸ್ಪೈಸ್‍ಜೆಟ್ ವಿಮಾನದೊಳಗೆ ವ್ಯಕ್ತಿಯೋರ್ವ ಸಿಗರೇಟ್ ಸೇದಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿದ್ದು ಸಿಗರೇಟ್ ಸೇದಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಗುಗಾರ್ಂವ್ ನಿವಾಸಿ ಬಾಬಿ ಕಟಾರಿಯಾ ವಿಮಾನದ ಸೀಟಿನ ಮೇಲೆ ಶೂಧರಿಸಿ ಮಲಗಿಕೊಂಡು, ಲೈಟರ್‌ನಲ್ಲಿ ಸಿಗರೇಟ್ ಹೊತ್ತಿಸಿಕೊಂಡು, ನಿಟ್ಟುಸಿರು ಬಿಡುತ್ತಾ ಸಿಗರೇಟ್ ಸೇದುತ್ತಿರುವುದನ್ನು ವೀಡಿಯೋದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬಾಬಿ ಕಟಾರಿಯಾ ಸಿಗರೇಟ್ ಸೇದುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರು ಟ್ವಿಟರ್ ನಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ […]

Continue Reading

ನಟ ಸುದೀಪ್ ಗೆ ಧ್ವಜ ನೀಡಿದ ಬಿಜೆಪಿ ನಾಯಕರು: ‘’ಹರ್ ಘರ್ ತಿರಂಗಾ’’ ಅಭಿಯಾನಕ್ಕೆ ಕಿಚ್ಚಿನಿಗೆ ಆಹ್ವಾನ

ಬೆಂಗಳೂರು: ಜೆಪಿ ನಗರದಲ್ಲಿರುವ ನಟ ಕಿಚ್ಚ ಸುದೀಪ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಭೇಟಿ ನೀಡಿದೆ. ಈ ವೇಳೆ ತ್ರಿವರ್ಣ ಧ್ವಜ ನೀಡುವ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆಹ್ವಾನಿಸಿದೆ.ಆಗಸ್ಟ್ 13 ರಿಂದ 15ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸುವ ಅಭಿಯಾನ ಆಯೋಜಿಸಲಾಗಿದೆ. ನಿಮ್ಮ ನಿವಾಸದಲ್ಲೂ ತ್ರಿವರ್ಣ ಧ್ವಜ ಹಾರಿಸಬೇಕು ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸುದೀಪ್, ಗೌರವಪೂರ್ವಕವಾಗಿ ರಾಷ್ಟ್ರಧ್ವಜ ಸ್ವೀಕರಿಸಿದರು. ತಮ್ಮ […]

Continue Reading

ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ: ಹೊಸ ವಾಹನ ಖರೀದಿಗೆ ಶೇ.5 ರಿಯಾಯಿತಿ

ಬೆಂಗಳೂರು: ಕರ್ನಾಟಕದಲ್ಲೂ ಸ್ಕ್ರಾಫ್ ನೀತಿಯನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಮೋಟಾರ್ ವೆಹಿಕ್ ನಿಯಮ 2021 ಅನ್ನು, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ನಿಯಮವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಕರ್ನಾಟಕದಲ್ಲಿಯೂ ಜಾರಿಗೊಳಿಸಿ ಆದೇಶಿಸಿದ್ದಾರೆ. ಸ್ಕ್ರ್ಯಾಪೇಜ್ ನೀತಿಯು ಹಳೆಯ ವಾಹನಗಳನ್ನು ತೆಗೆದುಹಾಕುವ ಮತ್ತು ಸ್ಕ್ರ್ಯಾಪಿಂಗ್ಗೆ ಪ್ರೋತ್ಸಾಹಕಗಳನ್ನು ಪಾವತಿಸುವ ಮೂಲಕ ಆಟೋಮೊಬೈಲ್ ಉದ್ಯಮಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 2023 ರಿಂದ, ಎಲ್ಲಾ ರೀತಿಯ ಭಾರಿ […]

Continue Reading

ಸಿದ್ದರಾಮಯ್ಯ ಸರ್ಕಾರದಲ್ಲಿ ಪಠ್ಯ ಪರಿಷ್ಕರಣೆಯಾದಾಗ ಯಾರು ಯಾಕೆ ಧ್ವನಿ ಎತ್ತಲಿಲ್ಲ: ಸಚಿವ ಆರ್ ಅಶೋಕ್

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಪಠ್ಯ ಪರಿಷ್ಕರಣೆಯಾದಾಗ ಯಾರು ಯಾಕೆ ಧ್ವನಿ ಎತ್ತಲಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಪ್ರಶ್ನಿಸಿದರು. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರವು ಕೆಲವು ಪಠ್ಯಗಳನ್ನು ತೆಗೆದು ಹಾಕಿದ್ದಾವೆ. ಇವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟವಿರಲ್ಲ. ಹಿಂದೆ ಅವರಿಗೆ ಬೇಕಾದಂತೆ ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನೂ ನಮ್ಮ ಸರ್ಕಾರದ ಪಠ್ಯಪರಿಷ್ಕರಣೆ ಅವಧಿಯಲ್ಲಿ ಕುವೆಂಪು ಅವರ 8 ಪದ್ಯಗಳನ್ನು ಸೇರಿಸಲಾಗಿದೆ. ಹಿಡನ್ ಅಜೆಂಟ್ ಇರುವ ಕೆಲ ಸಾಹಿತಿಗಳು […]

Continue Reading

ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟ ಆರೋಪ: ಕೇಂದ್ರದ ವಿರುದ್ಧ ಕಿಡಿಕಾರಿದ ರಾಮಲಿಂಗಾರೆಡ್ಡಿ

ಬೆಂಗಳೂರು: ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟ ಆರೋಪ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೋವಿಡ್ ಡೆತ್ ಬಗ್ಗೆ ಪ್ರಶ್ನೆ ಕೇಳಿದ್ದೆ. ಅಂಕಿ ಅಂಶಗಳ ಸಮೇತ ಸಾವಿನ ಸಂಖ್ಯೆ ಎತ್ತಿದ್ದೆ. ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದರು. ಈಗ ಡಬ್ಲ್ಯೂ‌ಹೆಚ್​ಒನವರು ವರದಿ ಕೊಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳದ ವರದಿ ಕೊಟ್ಟಿದ್ದಾರೆ. ಇವರು ಸಾವಿನ ಸಂಖ್ಯೆ ಕಡಿಮೆ ನೀಡಿದ್ದರು ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು. ನಾನು 42 ಲಕ್ಷ […]

Continue Reading

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯೇ ಚರ್ಚೆ: ನಾಯಕತ್ವ ಕುರಿತ ಗೊಂದಲಗಳಿಗೆ ತೆರೆ ಎಳೆದ ಸಚಿವ ಅಮಿತ್ ಶಾ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯೇ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ನಿನ್ನೆ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರು, ನಾಯಕತ್ವ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ನೀವು ಉತ್ತಮ ಆಡಳಿತ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಮಿತ್ ಶಾ ತಿಳಿಸಿದ್ದಾರೆ. ಎಲೆಕ್ಷನ್ ಮತ್ತು ರಾಜಕೀಯ ವಿಚಾರಗಳನ್ನು ನಮಗೆ ಬಿಟ್ಟು ನೀವು ಆಡಳಿತ ನೋಡಿಕೊಳ್ಳಿ. ನಿಮ್ಮ ಮತ್ತು ಬಿ.ಎಸ್. ಯಡಿಯೂರಪ್ಪನವರ ನಾಯಕತ್ವದಲ್ಲಿ ಚುನಾವಣೆ ನಡೆಸಲಾಗುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ […]

Continue Reading