ಜಿಂಬಾಬ್ವೆಗೆ ತೆರಳಿದ ಟೀಂ ಇಂಡಿಯಾ ಆಟಗಾರರು..

ಸತತ ಸರಣಿಗಳಲ್ಲಿ ಬ್ಯುಸಿಯಾಗಿರುವ ಭಾರತ ಕ್ರಿಕೆಟ್ ತಂಡ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಇದೇ ತಿಂಗಳ 18ರಿಂದ ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಭಾರತ ತಂಡದ ಆಟಗಾರರು ಶನಿವಾರ ಜಿಂಬಾಬ್ವೆಗೆ ತೆರಳಿದ್ದಾರೆ. ಶಿಖರ್ ಧವನ್, ದೀಪಕ್ ಚಹಾರ್, ಪ್ರಸೀದ್ ಕೃಷ್ಣ, ಮೊಹಮ್ಮದ್ ಸಿರಾಜ್, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್ ಮತ್ತು ಇತರರು ವಿಮಾನದಲ್ಲಿ ಹೊರಟರು.    

Continue Reading

CSA T20 Leagueಗೆ ಭರದ ಸಿದ್ದತೆ: ಮತ್ತೆ CSK ತಂಡಕ್ಕೆ ಫಾಫ್ ಡು ಪ್ಲೆಸಿಸ್ ಸೇರ್ಪಡೆ

ಕೇಪ್‌ಟೌನ್‌: ಜನವರಿಯಲ್ಲಿ ಆರಂಭವಾಗಲಿರುವ ಕ್ರಿಕೆಟ್‌ ದಕ್ಷಿಣ ಆಫ್ರಿಕಾದ ಸಿಎಸ್‌ಎ ಟಿ20 ಲೀಗ್‌ಗೆ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಲಿಕ ತ್ವದ ಜೋಹಾನ್ಸ್‌ಬರ್ಗ್‌ ತಂಡಕ್ಕೆ ಫಾಫ್‌ ಡು ಪ್ಲೆಸಿಸ್ ಸೇರ್ಪಡೆಗೊಂಡಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಪರ ದೀರ್ಘ ಕಾಲ ಆಡಿದ್ದ ಅವರನ್ನು ತಂಡ ನೇರವಾಗಿ ಆಯ್ಕೆ ಮಾಡಿದೆ. ಐಪಿಎಲ್‌ನಲ್ಲಿ ಕಳೆದ ಆವೃತ್ತಿಯಲ್ಲಿ ಬೆಂಗಳೂರು ಪಡ ಆಡಿರುವ ಡು ಪ್ಲೆಸಿಸ್, 2011ರಿಂದ 2021ರ ವರೆಗೂ ಚೆನ್ನೈ ತಂಡದ ಭಾಗವಾಗಿದ್ದರು. ಇಂಗ್ಲೆಂಡ್‌ನ ಮೊಯೀನ್‌ ಅಲಿಯನ್ನೂ ತಂಡ ಖರೀದಿಸಿದೆ ಎನ್ನಲಾಗಿದೆ. ಇನ್ನು, ಮುಂಬೈ ಇಂಡಿಯನ್ಸ್‌ ಮಾಲಕತ್ವದ ಕೇಪ್‌ಟೌನ್‌ […]

Continue Reading

ಫೇಮಸ್ ಹಾಡಿಗೆ ಯಜುವೇಂದ್ರ ಚಾಹಲ್ ಪತ್ನಿಯ ಭರ್ಜರಿ ಡಾನ್ಸ್..! Video ವೈರಲ್

ಸಾಮಾಜಿಕ ಮಾಧ್ಯಮ ವೇದಿಕೆಯಾದ ಇನ್ಸ್‌ಟಾಗ್ರಾಮ್‌ನಲ್ಲಿ ನೀವು ಧನಶ್ರಿ ವರ್ಮ ಅವರನ್ನು ಫಾಲೋ ಮಾಡುತ್ತಿದ್ದರೆ, ನಿಮಗೆ ಬೋರ್‌ ಆಗಲು ಸಾಧ್ಯವೇ ಇಲ್ಲ. ನಿಯಮಿತವಾಗಿ ಹೊಸ ಹೊಸ ಡಾನ್ಸ್‌ ವಿಡಿಯೋಗಳನ್ನು ಇನ್ಸ್‌ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ. ಆಗಸ್ಟ್‌ 7 ರಂದು ಯಜುವೇಂದ್ರ ಚಾಹಲ್‌ ಪತ್ನಿ ಇನ್ಸ್‌ಟಾಗ್ರಾಮ್‌ನಲ್ಲಿ ಹೊಸ ಡಾನ್ಸ್‌ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದರಲ್ಲಿ ಅವರು ತೆಲುಗಿನ ಸೂಪರ್‌ಹಿಟ್‌ ಗೀತೆ ರಾ ರಾ ರೆಡಿ ಹಾಡಿಗೆ ಸಖತ್‌ ಆಗಿ ಡಾನ್ಸ್‌ ಮಾಡಿದ್ದಾರೆ. ನು ಮಾಚರ್ಲಾ ನಿಯೋಜಕವರ್ಗಂ […]

Continue Reading

Chess Olympiad 2022.. ಭಾರತ ತಂಡಕ್ಕೆ ಬಂಪರ್ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ: 44ನೇ ಚೆಸ್ ಒಲಿಂಪಿಯಾಡ್‌ ಕ್ರೀಡಾಕೂಟದಲ್ಲಿ ಭಾರತ ಪುರುಷರ ‘ಬಿ‘ ತಂಡ ಹಾಗೂ ಭಾರತ ಮಹಿಳಾ ‘ಎ‘ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ಮಹಾಬಲಿಪುರಂನಲ್ಲಿ ನಡೆದ ಚೆಸ್‌ ಒಲಿಂಪಿಯಾಡ್‌ನಲ್ಲಿ ಪದಕ ಗೆದ್ದ ಭಾರತದ ತಂಡಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ತಲಾ ಒಂದು ಕೋಟಿ ರುಪಾಯಿ ಬಹುಮಾನ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರದ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಒಳಾಂಗಣ ಕ್ರೀಡಾಕೂಟವು ಯಶಸ್ವಿಯಾಗಿ ಆಯೋಜನೆಗೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. FIDE ಚೆಸ್ ಒಲಿಂಪಿಯಾಡ್ ಕ್ರೀಡಾಕೂಟವು ಚೆನ್ನೈ ಸಮೀಪದ ಮಹಾಬಲಿಪುರಂನಲ್ಲಿ ಜುಲೈ 28ರಿಂದ ಆರಂಭವಾಗಿತ್ತು. ಮುಕ್ತ(ಪುರುಷರ) ವಿಭಾಗದಲ್ಲಿ ಭಾರತ ‘ಬಿ’ ತಂಡ ಕಂಚು ಗೆದ್ದರೆ, ಮಹಿಳಾ ವಿಭಾಗದಲ್ಲಿ ಭಾರತ ‘ಎ’ ತಂಡ ಸಹ 3ನೇ ಸ್ಥಾನ ಪಡೆಯಿತು.  ಮುಕ್ತ ವಿಭಾಗದ 11ನೇ ಹಾಗೂ ಅಂತಿಮ ಸುತ್ತಿನಲ್ಲಿ ಭಾರತ ‘ಬಿ’ ತಂಡ ಜರ್ಮನಿ ವಿರುದ್ಧ 3-1ರಲ್ಲಿ ಗೆದ್ದು 3ನೇ ಸ್ಥಾನ ಪಡೆಯಿತು. ಇನ್ನುಳಿದಂತೆ ಉಜ್ಬೇಕಿಸ್ತಾನ ಚಿನ್ನ ಗೆದ್ದರೆ, ಅರ್ಮೇನಿಯಾ ಬೆಳ್ಳಿ ಪದಕ ಜಯಿಸಿತು. ಇನ್ನು ಮಹಿಳಾ ವಿಭಾಗದಲ್ಲಿ ಅಗ್ರ ಶ್ರೇಯಾಂಕ ಹೊಂದಿದ್ದ ಭಾರತ ‘ಎ’ ತಂಡ 11ನೇ ಹಾಗೂ ಕೊನೆಯ ಸುತ್ತಿನಲ್ಲಿ ಅಮೆರಿಕ ವಿರುದ್ಧ 1-3ರಲ್ಲಿ ಸೋತು ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತು. ಕೊನೆರು ಹಂಪಿ ನೇತೃತ್ವದ ಭಾರತ ಮಹಿಳಾ ಚೆಸ್‌ ತಂಡವು 3ನೇ ಸ್ಥಾನ ಪಡೆಯಿತು. ಭಾರತ ಚೆಸ್‌ ತಂಡದ ಪ್ರದರ್ಶನದ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹರ್ಷ ವ್ಯಕ್ತಪಡಿಸಿದ್ದು, ಚೆಸ್‌ ಒಲಿಂಪಿಯಾಡ್‌ನಲ್ಲಿ ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆಪಡುವಂತಹ ಸಾಧನೆ ಮಾಡಿದ ಭಾರತದ ಎರಡೂ ತಂಡಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರದ ವತಿಯಿಂದ ಪದಕ ಗೆದ್ದ ಭಾರತದ ಎರಡೂ ತಂಡಗಳಿಗೆ ತಲಾ ಒಂದು ಕೋಟಿ ರುಪಾಯಿ ನಗದು ಬಹುಮಾನ ನೀಡಿ ಗೌರವಿಸುವುದಾಗಿ ಸ್ಟಾಲಿನ್ ತಿಳಿಸಿದ್ದಾರೆ. ಚೆಸ್ ಒಲಿಂಪಿಯಾಡ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಟಾರ್ಚ್‌ ರಿಲೇಯನ್ನು ಪರಿಚಯಿಸಲಾಗಿತ್ತು. 187 ರಾಷ್ಟ್ರ ಗಳ ಆಟಗಾರರು ಕೂಟದಲ್ಲಿ ಪಾಲ್ಗೊಂಡಿದ್ದರು.

Continue Reading

ನಿವೃತ್ತಿ ಘೋಷಿಸಿದ ಖ್ಯಾತ ಟೆನಿಸ್ ತಾರೆ!

“ಕೌಂಟ್‌ಡೌನ್ ಪ್ರಾರಂಭವಾಗಿದೆ” ಎಂದು ಹೇಳುವ ಮೂಲಕ 23 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಸೆರೆನಾ ವಿಲಿಯಮ್ಸ್ ಅವರು ಟೆನಿಸ್‌ನಿಂದ ದೂರವಿರಲು ಸಿದ್ಧರಿದ್ದಾರೆ ಎಂದು ಮಂಗಳವಾರ ಘೋಷಿಸಿದರು, ಆದ್ದರಿಂದ ಅವರು ಕ್ರೀಡೆಗಳನ್ನು ಮೀರಿದ ವೃತ್ತಿಜೀವನದ ಅಂತ್ಯವನ್ನು ಮುನ್ಸೂಚಿಸುವ ಮೂಲಕ ಮತ್ತೊಂದು ಮಗುವನ್ನು ಹೊಂದಲು ಗಮನಹರಿಸಿದ್ದಾರೆ. “ನಾವು ಬೇರೆ ದಿಕ್ಕಿನಲ್ಲಿ ಚಲಿಸಲು ನಿರ್ಧರಿಸಬೇಕಾದ ಸಮಯ ಜೀವನದಲ್ಲಿ ಬರುತ್ತದೆ. ನೀವು ಏನನ್ನಾದರೂ ತುಂಬಾ ಪ್ರೀತಿಸಿದಾಗ ಆ ಸಮಯ ಯಾವಾಗಲೂ ಕಠಿಣವಾಗಿರುತ್ತದೆ. ನಾನು ಟೆನಿಸ್ ಅನ್ನು ಆನಂದಿಸುತ್ತೇನೆ. ಆದರೆ ಈಗ, ಕೌಂಟ್‌ಡೌನ್ ಪ್ರಾರಂಭವಾಗಿದೆ […]

Continue Reading

Commonwealth Games.. ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ ಸಿಂಧು

ಬರ್ಮಿಂಗ್ ಹ್ಯಾಂ: ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಅಗ್ರ ಕ್ರಮಾಂಕದ ಷಟ್ಲರ್ ಪಿ.ವಿ. ಸಿಂಧು ಕಾಮನ್ ವೆಲ್ತ್ ಗೇಮ್ಸ್ ನ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಇಂದು ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ಅಂತರದಲ್ಲಿ ಜಯಗಳಿಸುವ ಮೂಲಕ ಪಿ.ವಿ. ಸಿಂಧು ಚಿನ್ನದ ಪದಕ ಜಯಿಸಿದ್ದಾರೆ. ಸಿಂಧು ಈ ಮುನ್ನ 2014ರಲ್ಲಿ ಗ್ಲಾಸ್ಕೋವ್ ನಲ್ಲಿ ನಡೆದಿದ್ದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಜಯಿಸಿದ್ದರೆ, 2018 […]

Continue Reading

ಕುಸ್ತಿ ಪಟು ಪೂಜಾ ಗೆಹ್ಲೋಟ್ ಗೆ ಸ್ಪೂರ್ತಿ ತುಂಬಿದ ಪ್ರಧಾನಿ ಮೋದಿ: ಇಂಟರ್ ನೆಟ್ ನಲ್ಲಿ ಸಿಕ್ಕಾಪಟ್ಟೆ ಪ್ರಶಂಸೆ

ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು 40ಕ್ಕೂ ಹೆಚ್ಚು ಪದಕ ಗೆದ್ದು ಕೀರ್ತಿ ಪತಾಕೆ ಹಾರಿಸಿದ್ದಾರೆ. ಈ ನಡುವೆ ಕುಸ್ತಿಯಲ್ಲಿ ಚಿನ್ನದ ಪದಕ ಗೆಲ್ಲಲು ವಿಫಲವಾದ ಪೂಜಾ ಗೆಹ್ಲೋಟ್ ಆಡಿದ ಬೇಸರದ ನುಡಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಧಾನದ ಮಾತುಗಳಿಂದ ಕ್ರೀಡಾಪಟುವಿಗೆ ಧೈರ್ಯ ತುಂಬಿದ್ದಾರೆ. ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಪೂಜಾ ಗೆಹ್ಲೋಟ್ ಸ್ಕಾಟ್ಲೆಂಡ್‍ನ ಕ್ರಿಸ್ಟೆಲ್ಲೆ ಲೆಮೊಫ್ಯಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದರು.   ಆ ಬಳಿಕ ಸಂಭ್ರಮ ಹಂಚಿಕೊಳ್ಳುತ್ತ ಪೂಜಾ ಗೆಹ್ಲೋಟ್, ನಾನು […]

Continue Reading

WI vs Ind.. ವಿಂಡಿಸ್ ವಿರುದ್ಧ 59 ರನ್ ಗಳ ಜಯ ಸಾಧಿಸಿದ ಟೀಂ ಇಂಡಿಯಾ

ಫ್ಲೋರಿಡಾ: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ವಿಂಡಿಸ್‌ ವಿರುದ್ಧ 59 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ 20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 191 ರನ್‌ಗಳಿಸಿತು. 192 ರನ್‌ಗಳ ಗುರಿಯನ್ನು ಪಡೆದ ವಿಂಡೀಸ್‌ 19.1 ಓವರ್‌ಗಳಲ್ಲಿ 132 ರನ್‌ಗಳಿಗೆ ಆಲೌಟ್‌ ಆಯ್ತು. ಆರಂಭದಿಂದಲೇ ವಿಕೆಟ್‌ ಕಳೆದುಕೊಳ್ಳಲು ಆರಂಭಿಸಿದ ವಿಂಡೀಸ್‌ ಪರ ನಾಯಕ ನಿಕೋಲಸ್‌ […]

Continue Reading

Commonwealth Games 2022.. ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ

ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ 9ನೇ ದಿನ ಭಾರತದ ಕುಸ್ತಿ ಪಟುಗಳು ಗೆಲುವಿನ ನಗೆ ಬೀರಿದ್ದಾರೆ. ನವೀನ್ ಕುಮಾರ್ ದಹಿಯಾ, ವಿನೇಶ್ ಫೋಗಟ್ ಚಿನ್ನದ ಪದಕ ಗೆದ್ದರೆ, ಪೂಜಾ ಗೆಹ್ಲೋಟ್ ಕಂಚಿನ ಪದಕ ಗೆದ್ದು ಭಾರತಕ್ಕೆ ಸಂಭ್ರಮ ತಂದಿದ್ದಾರೆ. ಪುರುಷರ 57 ಕೆಜಿ ವಿಭಾಗದ ಕುಸ್ತಿಯಲ್ಲಿ ನವೀನ್ ಕುಮಾರ್ ದಹಿಯಾ, ಎಬಿಕೆವೆನಿಮೊ ವೆಲ್ಸನ್ ಅವರನ್ನು 10-0 ಅಂತರದಿಂದ ಸೋಲಿಸಿ ಚಿನ್ನದ ಪದಕ ಗೆದ್ದು ಬೀಗಿದರು. ಇತ್ತ ಮಹಿಳೆಯರ 53 ಕೆಜಿ ವಿಭಾಗದಲ್ಲಿ ವಿನೇಶ್ ಫೋಗಟ್ ಚಿನ್ನ ಗೆದ್ದು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ […]

Continue Reading

Commonwealth Games 2022.. ಚೊಚ್ಚಲ ಚಿನ್ನದ ಪದಕ ಗೆದ್ದ ಬಾಕ್ಸರ್ ಅಮಿತ್ ಪಂಘಾಲ್

ನವದೆಹಲಿ : ಭಾರತದ ಬಾಕ್ಸರ್ ಅಮಿತ್ ಪಂಗಲ್ ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ ಫ್ಲೈವೇಟ್ (48-51 ಕೆಜಿ) ವಿಭಾಗದಲ್ಲಿ ಯುರೋಪಿಯನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಮೆಕ್‌ಡೊನಾಲ್ಡ್ ಕೀರನ್ ಅವರನ್ನು 5-0 ಅಂತರದಿಂದ ಸೋಲಿಸಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಪಂಗಲ್ ಅವರು ಈ ಸಾಧನೆ ಮಾಡಿದ್ದಾರೆ.

Continue Reading