ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರ ದಾಳಿ: ಮಹಿಳೆ ಬಂಧನ

ಬೆಂಗಳೂರು

ಬೆಂಗಳೂರು: ಸಲೂನ್ ಮತ್ತು ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಟಿ.ದಾಸರಹಳ್ಳಿ, ಹೆಸರಘಟ್ಟ ಮುಖ್ಯರಸ್ತೆಯ ಸಲೂನ್ ಮತ್ತು ಸ್ಪಾದಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿದೆ. ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ಪಾ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀ ಸರು ಒಬ್ಬ ಮಹಿಳೆಯನ್ನು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಲೂನ್‍ನ ಪರವಾನಗಿಯನ್ನು ರದ್ದುಪಡಿಸಲು ಬಿಬಿಎಂಪಿಗೆ ತಿಳಿಸಲಾಗಿದೆ.  ಆರೋಪಿಗಳ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.