ಧರ್ಮ ಗುರುಗಳ ಹೆಗ್ಗಳಿಕೆಗೆ ಪಾತ್ರವಾದ ಚಿತ್ರೋತ್ಸವ: ಇತಿಹಾಸದಲ್ಲೇ ಮೊದಲ ಬಾರಿಗೆ ಧರ್ಮಪೀಠದ ಜಗದ್ಗುರುಗಳು ಭಾಗಿ

ಬೆಂಗಳೂರು

ಬೆಂಗಳೂರು: 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಇದೀಗ ಧರ್ಮ ಗುರುಗಳ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂತಾರಾ ಷ್ಟ್ರೀಯ ಚಿತ್ರೋತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರಮುಖ ಧರ್ಮಪೀಠದ ಜಗದ್ಗುರುಗಳು ಸಿನಿಮೋತ್ಸವದಲ್ಲಿ ಭಾಗಿಯಾಗುವ ಮೂಲಕ ಹೊಸ ಆರಂಭವೊಂದಕ್ಕೆ ನಾಂದಿ ಹಾಡಿದರು. ಮೈಸೂರಿನ ಪ್ರತಿಷ್ಠಿತ ಸುತ್ತೂರು ಶ್ರೀ ಮಠದ ಸಾವಿರ ವರ್ಷಗಳ ಇತಿಹಾಸವನ್ನು ಕಟ್ಟಿ ಕೊಟ್ಟಿರುವ ಸುತ್ತೂರು ಶ್ರೀ ಮಠ ಗುರು ಪರಂಪರೆ ಅನಿಮೇಷನ್‌ ಚಿತ್ರ ಪ್ರದರ್ಶನಕ್ಕೆ

ನಿನ್ನೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸಾಕ್ಷಿಯಾಯಿತು. ಅಮೆರಿಕ, ಜಪಾನ್‌, ಇಟಲಿಯಲ್ಲಿ ಪ್ರದರ್ಶನಗೊಂಡು ಬಹು ಮಾನಗಳಿಗೆ ಸತ್ಪಾತ್ರವಾಗಿರುವ ಈ ವಿಶಿಷ್ಟ ಅನಿಮೇಷನ್‌ ಚಿತ್ರ ಪ್ರದರ್ಶನದಲ್ಲಿ ಸುತ್ತೂರು ಶ್ರೀ ಮಠದ ಜಗದ್ಗುರು ಶಿವಮೂರ್ತಿ ದೇಶಿಕೇಂದ್ರ ಸಾಮೀಜಿಗಳು, ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಹಾಗೂ ಬೆಂಗಳೂರಿನ ಹಲವು ಮಠಗಳ ಧಾರ್ಮಿಕ ಗುರುಗಳು ಪಾಲ್ಗೊಂಡು ಚಿತ್ರ ವೀಕ್ಷಿಸಿದರು.

Leave a Reply

Your email address will not be published.