Home Crime ಇಂದು ಚಾಮರಾಜನಗರ ಜಿಲ್ಲೆಯಲ್ಲಿ 343 ಕೋರೊನಾ ದೃಡ; 08ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದುರ್ಮರಣ

ಇಂದು ಚಾಮರಾಜನಗರ ಜಿಲ್ಲೆಯಲ್ಲಿ 343 ಕೋರೊನಾ ದೃಡ; 08ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದುರ್ಮರಣ

ಇಂದು ಚಾಮರಾಜನಗರ ಜಿಲ್ಲೆಯಲ್ಲಿ 343 ಕೋರೊನಾ ದೃಡ; 08ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದುರ್ಮರಣ

369
0

ವರದಿ: ನಾ. ಅಶ್ವಥ ಕುಮಾರ್

ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋರೊನಾ ಸೋಂಕು ಹಾಗೂ ಸಾವಿನ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಮಂಗಳವಾರ ಒಂದೇ ದಿನ 343 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಕೋರೊನಾ ಸೋಂಕಿನಿಂದ ಬಳಲುತ್ತಿದ್ದ 08 ಮಂದಿ ಸಾವನ್ನಪ್ಪಿದ್ದು ಇದೂವರೆಗೂ 316 ಸೋಂಕಿತರು ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಜಿಲ್ಲೆಯಲ್ಲಿ ಸಕ್ರೀಯ ಕೋರೋನಾ ಸೋಂಕಿತರ ಸಂಖ್ಯೆ 3769 ಕ್ಕೆ ಇಳಿದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮಂಗಳವಾರ ಕೋರೊನಾ ಸೋಂಕಿನಿಂದ ಗುಣಮುಖರಾಗಿ 359 ಮಂದಿ ಬಿಡುಗಡೆಹೊಂದಿದ್ದು, ಇದೂವರೆಗೂ ಕೋರೊನಾ ಸೋಂಕಿನಿಂದ 17261 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯಿಂದ 305 ಹಾಗೂ ರ್ಯಾಪಿಡ್ ಪರೀಕ್ಷೆಯಿಂದ 38 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ.

18.05.2021

ಮಂಗಳವಾರ ಹೊಸದಾಗಿ ಕೋರೊನಾ ಸೋಂಕು ಪತ್ತೆಯಾದ 343 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 112 , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 46 , ಕೋಳ್ಳೆಗಾಲ ತಾಲ್ಲೂಕಿನಲ್ಲಿ 106 , ಹನೂರು ತಾಲ್ಲೂಕಿನಲ್ಲಿ 55, ಯಳಂದೂರು ತಾಲ್ಲೂಕಿನಲ್ಲಿ 20 ಮಂದಿ, ಹೊರ ಜಿಲ್ಲೆಯ ನಾಲ್ವರು ಸೇರಿ 343 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಮವಾರ 644 ಮಂದಿ ಕೋರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದು, ಇದೂವರೆಗೂ 172181 ಮಂದಿ ಕೊರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದಾರೆ .

ಕೋರೊನಾ ಸೋಂಕಿನಿಂದ ಮೃತವರೆಂದರೆ, ಚಾಮರಾಜನಗರ ಪಟ್ಟಣದ 70 ವರ್ಷದ ಮಹಿಳೆ, 85 ವರ್ಷದ ಪುರುಷ, ತಾಲ್ಲೂಕಿನ ಬಿಸಲವಾಡಿ ಗ್ರಾಮದ 43 ವರ್ಷದ ಪುರುಷ, ಕೊತ್ತಲವಾಡಿ ಗ್ರಾಮದ 52 ವರ್ಷದ ಮಹಿಳೆ, ಕೊಳ್ಳೇಗಾಲ ತಾಲ್ಲೂಕಿನ ಗುಂಡಾಪುರ ಗ್ರಾಮದ 45 ವರ್ಷದ ಪುರುಷ, ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದ 60 ವರ್ಷದ ಪುರುಷ, ಹನೂರು ಪಟ್ಟಣದ 51 ವರ್ಷದ ಪುರುಷ, ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ 35 ವರ್ಷದ ಪುರುಷ, ಕೋವಿಡ್ ಆಸ್ಪತ್ರೆಯಯಲ್ಲಿ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ. ಇದೂವರೆಗೂ ಕೋವಿಡ್ ಸೋಂಕಿತರು ಮೃತಪಟ್ಟಿದ್ದರೆ, ದೃಡೀಕೃತ ಕೋವಿಡ್ ಪಾಸಿಟೀವ್ ರೋಗಿಯು ಕೋವಿಡೇತರ ಕಾರಣದಿಂದ 20 ಮಂದಿ ಸಾವನ್ನಪ್ಪದ್ದಾರೆ ಎಂದು ಚಾಮರಾಜನಗರ ಜಿಲ್ಲಾಡಳಿತ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

VIAಇಂದು ಚಾಮರಾಜನಗರ ಜಿಲ್ಲೆಯಲ್ಲಿ 343 ಕೋರೊನಾ ದೃಡ; 08ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದುರ್ಮರಣ
SOURCEಇಂದು ಚಾಮರಾಜನಗರ ಜಿಲ್ಲೆಯಲ್ಲಿ 343 ಕೋರೊನಾ ದೃಡ; 08ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದುರ್ಮರಣ
Previous articleಕೋವಿಡ್ ಆಸ್ಪತ್ರೆಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ!
Next articleಹಳ್ಳಿಗಳನ್ನೂ ಬಿಡದ ಮಹಾಮಾರಿ ಕೊರೋನಾ!

LEAVE A REPLY

Please enter your comment!
Please enter your name here