Home District ಹನ್ನೋಂದು ಮಂದಿ ಸಾವು; ಸೋಂಕಿತರು ಸಾವನ್ನಪ್ಪುತ್ತಿರುವ ಬಗ್ಗೆ ಜನತೆ ತೀರಾ ಆತಂಕ

ಹನ್ನೋಂದು ಮಂದಿ ಸಾವು; ಸೋಂಕಿತರು ಸಾವನ್ನಪ್ಪುತ್ತಿರುವ ಬಗ್ಗೆ ಜನತೆ ತೀರಾ ಆತಂಕ

ಹನ್ನೋಂದು ಮಂದಿ ಸಾವು; ಸೋಂಕಿತರು ಸಾವನ್ನಪ್ಪುತ್ತಿರುವ ಬಗ್ಗೆ ಜನತೆ ತೀರಾ ಆತಂಕ

571
0

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ ಗಂಟೆಯ ತನಕ ಹನ್ನೋಂದು ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 11 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 5 ಮಂದಿ, ಯಳಂದೂರು ತಾಲ್ಲೂಕಿನ 5 ಮಂದಿ, ಹನೂರು ತಾಲ್ಲೂಕಿನ ಒಬ್ಬರು ಸೇರಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 11 ಮಂದಿ ಸಾವನ್ನಪ್ಪಿದ್ದು ಗಮನಿಸಿದೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಇಂದಿನಿಂದ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

VIAಹನ್ನೋಂದು ಮಂದಿ ಸಾವು; ಸೋಂಕಿತರು ಸಾವನ್ನಪ್ಪುತ್ತಿರುವ ಬಗ್ಗೆ ಜನತೆ ತೀರಾ ಆತಂಕ
SOURCEಹನ್ನೋಂದು ಮಂದಿ ಸಾವು; ಸೋಂಕಿತರು ಸಾವನ್ನಪ್ಪುತ್ತಿರುವ ಬಗ್ಗೆ ಜನತೆ ತೀರಾ ಆತಂಕ
Previous articleಚಾಮರಾಜನಗರದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ : ಕಳೆದ 24 ಗಂಟೆಯಲ್ಲಿ 11 ಮಂದಿ ಸೋಂಕಿಗೆ ಬಲಿ
Next articleಹಸಿದವರ ನೆರವಿಗೆ ಧಾವಿಸಿದ ಗುಂಡ್ಲುಪೇಟೆ ಜಾಮೀಯ ಮಸೀದಿ ಟ್ರಸ್ಟ್; 300 ಕಿಟ್ ವಿತರಣೆ

LEAVE A REPLY

Please enter your comment!
Please enter your name here