Home District ಇಂದು ಚಾಮರಾಜನಗರ ಜಿಲ್ಲೆಯಲ್ಲಿ 669 ಮಂದಿ ಕೋರೊನಾ ದೃಢ; 4572 ಸಕ್ರಿಯ ಪ್ರಕರಣ

ಇಂದು ಚಾಮರಾಜನಗರ ಜಿಲ್ಲೆಯಲ್ಲಿ 669 ಮಂದಿ ಕೋರೊನಾ ದೃಢ; 4572 ಸಕ್ರಿಯ ಪ್ರಕರಣ

ಇಂದು ಚಾಮರಾಜನಗರ ಜಿಲ್ಲೆಯಲ್ಲಿ 669 ಮಂದಿ ಕೋರೊನಾ ದೃಢ; 4572 ಸಕ್ರಿಯ ಪ್ರಕರಣ

310
0

ವರದಿ: ನಾ ಅಶ್ವಥ ಕುಮಾರ್

ಸೋಮವಾರ 8 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದುರ್ಮರಣ, ಭಾನುವಾರ 263 ಮಂದಿಗೆ ಲಸಿಕೆ ಇದೂವರೆಗೂ 164060 ಮಂದಿಗೆ ಲಸಿಕೆ.

ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಚಾಮರಾಜನಗರ ಜಿಲ್ಲೆಗೆ ಸೋಮವಾರ ಕರಾಳವೆನಿಸಿದೆ.ಸೋಮವಾರ ಒಂದೇ ದಿನ 669 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಕೋರೊನಾ ಸೋಂಕಿನಿಂದ ಬಳಲುತ್ತಿದ್ದ 8 ಮಂದಿ ಸಾವನ್ನಪ್ಪಿದ್ದು ಇದೂವರೆಗೂ 245 ಸೋಂಕಿತರು ಮೃತಪಟ್ಟಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಜಿಲ್ಲೆಯಲ್ಲಿ ಸಕ್ರೀಯ ಕೋರೋನಾ ಸೋಂಕಿತರ ಸಂಖ್ಯೆ 4572 ಕ್ಕೇರಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಸೋಮವಾರ ಕೋರೊನಾ ಸೋಂಕಿನಿಂದ ಗುಣಮುಖರಾಗಿ 611 ಮಂದಿ ಬಿಡುಗಡೆಹೊಂದಿದ್ದು, ಇದೂವರೆಗೂ ಕೋರೊನಾ ಸೋಂಕಿನಿಂದ 12377 ಮಂದಿ ಗುಣಮುಖರಾಗಿದ್ದಾರೆ . ಸೋಮವಾರ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯಿಂದ 645 ಹಾಗೂ ರ್ಯಾಪಿಡ್ ಪರೀಕ್ಷೆಯಿಂದ 45 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ .

ಸೋಮವಾರ ಹೊಸದಾಗಿ ಕೋರೊನಾ ಸೋಂಕು ಪತ್ತೆಯಾದ 669 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 284 , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 131 , ಕೋಳ್ಳೆಗಾಲ ತಾಲ್ಲೂಕಿನಲ್ಲಿ 153 , ಹನೂರು ತಾಲ್ಲೂಕಿನಲ್ಲಿ 47, ಯಳಂದೂರು ತಾಲ್ಲೂಕಿನಲ್ಲಿ 54 ಮಂದಿ ಸೇರಿ 669 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಭಾನುವಾರ 263 ಮಂದಿ ಕೋರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದು, ಇದೂವರೆಗೂ 164060 ಮಂದಿ ಕೊರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದಾರೆ .

ಕೋರೊನಾ ಸೋಂಕಿನಿಂದ ಮೃತವರೆಂದರೆ, ಚಾಮರಾಜನಗರ ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ 7 ಮಂದಿ, ಹನೂರು ತಾಲ್ಲೂಕಿನ ಒಬ್ಬರು ಕೋವಿಡ್ ಆಸ್ಪತ್ರೆಯಯಲ್ಲಿ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ. ಇದೂವರೆಗೂ 245 ಕೋವಿಡ್ ಸೋಂಕಿತರು ಮೃತಪಟ್ಟಿದ್ದರೆ, ದೃಡೀಕೃತ ಕೋವಿಡ್ ಪಾಸಿಟೀವ್ ರೋಗಿಯು ಕೋವಿಡೇತರ ಕಾರಣದಿಂದ 20 ಮಂದಿ ಸಾವನ್ನಪ್ಪದ್ದಾರೆ ಎಂದು ಚಾಮರಾಜನಗರ ಜಿಲ್ಲಾಡಳಿತ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

VIAಇಂದು ಚಾಮರಾಜನಗರ ಜಿಲ್ಲೆಯಲ್ಲಿ 669 ಮಂದಿ ಕೋರೊನಾ ದೃಢ; 4572 ಸಕ್ರಿಯ ಪ್ರಕರಣ
SOURCEಇಂದು ಚಾಮರಾಜನಗರ ಜಿಲ್ಲೆಯಲ್ಲಿ 669 ಮಂದಿ ಕೋರೊನಾ ದೃಢ; 4572 ಸಕ್ರಿಯ ಪ್ರಕರಣ
Previous articleಕಂದಾಯ ಸಚಿವರಿಗೆ ಪತ್ರದ ಮೂಲಕ MTB ನಾಗರಾಜ್ ಹೇಳಿದ್ದೇನು?
Next articleಲಾಕ್ ಡೌನ್ ಹಿನ್ನಲೆ : ಇಂದಿರಾ ಕ್ಯಾಂಟೀನಲ್ಲಿ ಉಚಿತ ತಿಂಡಿ-ಊಟ ವಿತರಣೆ

LEAVE A REPLY

Please enter your comment!
Please enter your name here