ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 14ಮಂದಿ ಸಾವು!

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 14ಮಂದಿ ಸಾವು!

330
0

ವರದಿ: ನಾ. ಅಶ್ವಥ್ ಕುಮಾರ್

ಕೋವಿಡ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9ಗಂಟೆವರೆಗೆ 14 ಮಂದಿ ಸಾವು.ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 14 ಸೋಂಕಿತರ ಸಾವು.ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆಯ ತನಕ 14 ಮಂದಿ ದುರ್ಮರಣ.

ಚಾಮರಾಜನಗರ ತಾಲ್ಲೂಕಿನ 7, ಕೊಳ್ಳೇಗಾಲ ತಾಲ್ಲೂಕಿನಲ್ಲಿ 3, ಯಳಂದೂರು ತಾಲ್ಲೂಕಿನಲ್ಲಿ 0, ಹನೂರು ತಾಲ್ಲೂಕಿನ 4, ಗುಂಡ್ಲುಪೇಟೆ ತಾಲ್ಲೂಕಿನ 0 , ಸೇರಿ 14 ಮಂದಿ ದುರ್ಮರಣ.

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆಯ ತನಕ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 14 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 7 , ಕೊಳ್ಳೇಗಾಲ ತಾಲ್ಲೂಕಿನಲ್ಲಿ 3 , ಯಳಂದೂರು ತಾಲ್ಲೂಕಿನಲ್ಲಿ 0 , ಹನೂರು ತಾಲ್ಲೂಕಿನ 4, ಗುಂಡ್ಲುಪೇಟೆ ತಾಲ್ಲೂಕಿನ 0 , ಸೇರಿ 14 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 6 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 3 ಮಂದಿ, ಕೊಳ್ಳೇಗಾಲ ತಾಲ್ಲೂಕಿನ 1 ಮಂದಿ , ಹನೂರು ತಾಲ್ಲೂಕಿನಲ್ಲಿ 2 ಮಂದಿ, ಸಾವನ್ನಪ್ಪಿದ್ದಾರೆ.ಮಂಗಳವಾರ ಸಂಜೆ 6 ರಿಂದ ಬುಧವಾರ ಬೆಳಗ್ಗೆ 9 ಗಂಟೆಯ ತನಕ 8 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 4 ಮಂದಿ ,ಕೊಳ್ಳೇಗಾಲ ತಾಲ್ಲೂಕಿನ 2 ಮಂದಿ, ಹನೂರು ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ.

 

24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 14 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದರೆ, 7 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ.ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 14 ಮಂದಿ ಸಾವನ್ನಪ್ಪಿದ್ದು ಗಮನಿಸಿದರೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

VIAಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 14ಮಂದಿ ಸಾವು!
SOURCEಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 14ಮಂದಿ ಸಾವು!
Previous articleಹಟ್ಟಿ ಚಿನ್ನದ ಗಣಿಗೆ ಗಣಿ ಸಚಿವ ಮುರುಗೇಶ್ ನಿರಾಣಿ ಭೇಟಿ!…
Next articleಬಜೆಟ್ ನಿಂದ ಯಾರಿಗೆ ಲಾಭ? ಯಾರಿಗೆ ನಷ್ಠ?

LEAVE A REPLY

Please enter your comment!
Please enter your name here