Home District ಇಂದು ಚಾಮರಾಜನಗರ ಜಿಲ್ಲೆಯಲ್ಲಿ 377 ಮಂದಿ ಕೋರೊನಾ ದೃಢ; 2130ಕ್ಕೆ ಏರಿದ ಸಕ್ರಿಯ ಪ್ರಕರಣ

ಇಂದು ಚಾಮರಾಜನಗರ ಜಿಲ್ಲೆಯಲ್ಲಿ 377 ಮಂದಿ ಕೋರೊನಾ ದೃಢ; 2130ಕ್ಕೆ ಏರಿದ ಸಕ್ರಿಯ ಪ್ರಕರಣ

427
0

ಚಾಮರಾಜನಗರ : ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಗುರುವಾರ ಸಂಜೆಯ ತನಕ ಹೊಸದಾಗಿ 377 ಕೋರೊನಾ ಸೋಂಕಿತರು ಪತ್ತೆ ಹಚ್ಚಲಾಗಿದೆ. ಗುರುವಾರ ಕೋರೊನಾ ಸೋಂಕಿನಿಂದ ಬಳಲುತ್ತಿದ್ದ ಏಳು ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇದೂವರೆಗೂ ಸಾವನ್ನಪ್ಪಿದವರ ಸಂಖ್ಯೆ 138 ಕ್ಕೇರಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಜಿಲ್ಲೆಯಲ್ಲಿ ಸಕ್ರೀಯ ಕೋರೋನಾ ಸೋಂಕಿತರ ಸಂಖ್ಯೆ 2130 ಕ್ಕೇರಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಗುರುವಾರ ಕೋರೊನಾ ಸೋಂಕಿನಿಂದ ಗುಣಮುಖರಾಗಿ 215 ಮಂದಿ ಬಿಡುಗಡೆಹೊಂದಿದ್ದು, ಇದೂವರೆಗೂ ಕೋರೊನಾ ಸೋಂಕಿನಿಂದ 8296 ಮಂದಿ ಗುಣಮುಖರಾಗಿದ್ದಾರೆ . ಗುರುವಾರ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯಿಂದ 253 ಹಾಗೂ ರ್ಯಾಪಿಡ್ ಪರೀಕ್ಷೆಯಿಂದ 24 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ .

ಗುರುವಾರ ಹೊಸದಾಗಿ ಕೋರೊನಾ ಸೋಂಕು ಪತ್ತೆಯಾದ 377 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 136 , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 76 , ಕೋಳ್ಳೆಗಾಲ ತಾಲ್ಲೂಕಿನಲ್ಲಿ 82 , ಹನೂರು ತಾಲ್ಲೂಕಿನಲ್ಲಿ 41 , ಯಳಂದೂರು ತಾಲ್ಲೂಕಿನಲ್ಲಿ 39 ಹಾಗೂ ಹೊರ ಜಿಲ್ಲೆಯ ಮೂವರು ಸೇರಿದಂತೆ 377 ಮಂದಿಗೆ ಕೋರೊನಾ ಸೋಂಕು ದೃಡವಾಗಿದೆ.

ಈ ನಡುವೆ ಜಿಲ್ಲೆಯಲ್ಲಿ ಬುಧವಾರ 2427 ಮಂದಿ ಕೋರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದು, ಇದೂವರೆಗೂ 146951 ಮಂದಿ ಕೊರೊನಾ ನಿಯಂತ್ರಣ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಜಿಲ್ಲಾಡಳಿತ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

Previous articleಗಂಡ ಹೆಂಡಿರ ಜಗಳ; ಕಣ್ತೆರೆಯುವುದರೊಳಗೇ ಶಿವನ ಪಾದ ಸೇರಿದ ಹಸುಳೆ!
Next articleಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ; ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

LEAVE A REPLY

Please enter your comment!
Please enter your name here