ಸಾವಿನ ಮನೆಯಾದ ಚಾಮರಾಜನಗರ; ಕಳೆದ 24 ಗಂಟೆಯಲ್ಲಿ 15 ಮಂದಿ ದುರ್ಮರಣ!

ಸಾವಿನ ಮನೆಯಾದ ಚಾಮರಾಜನಗರ; ಕಳೆದ 24 ಗಂಟೆಯಲ್ಲಿ 15 ಮಂದಿ ದುರ್ಮರಣ!

309
0

ವರದಿ: ನಾ.ಅಶ್ವಥ್ ಕುಮಾರ್

24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 15 ಮಂದಿ ಸಾವು;ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶನಿವಾರ ಬೆಳಗ್ಗೆ 9 ಗಂಟೆವರೆಗೆ 15 ಮಂದಿ ಸಾವು, ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 15 ಸೋಂಕಿತರ ಸಾವು,ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶನಿವಾರ ಬೆಳಗ್ಗೆ 9 ಗಂಟೆಯ ತನಕ 15 ಮಂದಿ ದುರ್ಮರಣ.ಚಾಮರಾಜನಗರ ತಾಲ್ಲೂಕಿನ 8 , ಯಳಂದೂರು ತಾಲ್ಲೂಕಿನಲ್ಲಿ 3 , ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 2 , ಹನೂರು ತಾಲ್ಲೂಕಿನ ಒಬ್ಬರು ಹಾಗೂ ನೆರೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಒಬ್ಬರು ಸೇರಿ 15 ಮಂದಿ ದುರ್ಮರಣ.

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶನಿವಾರ ಬೆಳಗ್ಗೆ 9 ಗಂಟೆಯ ತನಕ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 15 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 8 ಮಂದಿ, ಗುಂಡ್ಲುಪೇಟೆ ತಾಲ್ಲೂಕಿನ 2 ಮಂದಿ , ಯಳಂದೂರು ತಾಲ್ಲೂಕಿನಲ್ಲಿ ಮೂವರು, ಹನೂರು ತಾಲ್ಲೂಕಿನ ಒಬ್ಬರು ಪಕ್ಕದ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 5 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 3 ಮಂದಿ, ಯಳಂದೂರು ತಾಲ್ಲೂಕಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, ಶುಕ್ರವಾರ ಸಂಜೆ 6 ರಿಂದ ಶನಿವಾರ ಬೆಳಗ್ಗೆ 9 ಗಂಟೆಯ ತನಕ 10 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 5 ಮಂದಿ ,ಗುಂಡ್ಲುಪೇಟೆ ತಾಲ್ಲೂಕಿನ ಇಬ್ಬರು ಮಂದಿ ಹಾಗೂ ಯಳಂದೂರು ತಾಲ್ಲೂಕಿನ ಮೂವರು, ಹನೂರು ತಾಲ್ಲೂಕಿನ ಒಬ್ಬರು ಹಾಗೂ ನೆರೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಒಬ್ಬರು ಸಾವನ್ನಪ್ಪಿದ್ದಾರೆ.

24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 15 ಮಂದಿಯಲ್ಲಿ 9 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದರೆ, 6 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ.ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 15 ಮಂದಿ ಸಾವನ್ನಪ್ಪಿದ್ದು ಗಮನಿಸಿದರೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

VIAಸಾವಿನ ಮನೆಯಾದ ಚಾಮರಾಜನಗರ; ಕಳೆದ 24 ಗಂಟೆಯಲ್ಲಿ 15 ಮಂದಿ ದುರ್ಮರಣ!
SOURCEಸಾವಿನ ಮನೆಯಾದ ಚಾಮರಾಜನಗರ; ಕಳೆದ 24 ಗಂಟೆಯಲ್ಲಿ 15 ಮಂದಿ ದುರ್ಮರಣ!
Previous articleಕೋವಿಡ್ ಆಸ್ಪತ್ರೆಯಲ್ಲಿ ಕೀಬೋಡ್ ವಾದನ!; ವಿಡಿಯೋ ವೈರಲ್
Next articleಕರ್ತವ್ಯ ಮರೆತ ಪೊಲೀಸರು; ಜನರ ಬೇಕಾಬಿಟ್ಟಿ ಓಡಾಟ

LEAVE A REPLY

Please enter your comment!
Please enter your name here