Home District ಚಾಮರಾಜನಗರದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ!

ಚಾಮರಾಜನಗರದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ!

ಚಾಮರಾಜನಗರದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ!

283
0

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯ ತನಕ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 13ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 9 ಮಂದಿ, ಕೊಳ್ಳೇಗಾಲ ತಾಲ್ಲೂಕಿನ 2ಮಂದಿ, ಯಳಂದೂರು ತಾಲ್ಲೂಕಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 6 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 5 ಮಂದಿ, ಯಳಂದೂರು ತಾಲ್ಲೂಕಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಗುರುವಾರ ಸಂಜೆ 6 ರಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯ ತನಕ 7 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 4 ಮಂದಿ ,ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಮಂದಿ ಹಾಗೂ ಯಳಂದೂರು ಒಬ್ಬರು ಸಾವನ್ನಪ್ಪಿದ್ದಾರೆ.

24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 13 ಮಂದಿಯಲ್ಲಿ 3 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದರೆ, 10 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ವೈದ್ಯರು ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ 24 ಗಂಟೆಗಳಂತರದಲ್ಲಿ 13 ಮಂದಿ ಸಾವನ್ನಪ್ಪಿದ್ದು ಗಮನಿಸಿದರೆ ಕೋವಿಡ್ ಸೋಂಕು ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿದೆ ಎನ್ನಲಾಗುತ್ತಿದೆ.

ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.

VIAಚಾಮರಾಜನಗರದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ!
SOURCEಚಾಮರಾಜನಗರದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ!
Previous articleಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ಕರೆದಿದ್ದ ಸುದ್ದಿಘೋಷ್ಟಿಯಲ್ಲಿ ಧೃವನಾರಾಯಣ್ ಹೇಳಿದ್ದೇನು ಗೊತ್ತೇ?
Next articleಆಕ್ಸಿಜನ್ ದುರಂತದ ಬಗ್ಗೆ ಪ್ರಶ್ನಿಸಿದಾಗ ನಾಜೂಕಾಗಿ ನುಣುಚಿಕೊಂಡ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ

LEAVE A REPLY

Please enter your comment!
Please enter your name here