
ಚಂದ್ರಶೇಖರ್ ಗುರೂಜಿ ಬೆನ್ನಲ್ಲೇ ಮತ್ತೊಬ್ಬ ಗೂರೂಜಿ ಮೇಲೆ ಅಟ್ಯಾಕ್..!
ಬೆಂಗಳೂರು: ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ದರೋಡೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜ್ಯೋತಿಷಿ ಪ್ರಮೋದ್ ಮನೆಗೆ ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದಿದ್ದ ಮೂವರು ದರೋಡೆಕೋರರು ಮನೆಯಲ್ಲಿ ಒಬ್ಬರೇ ಇರುವ ವಿಷಯ ತಿಳಿದು ಅವರ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ 400 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ, 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೆಂಗೇರಿ ಠಾಣಾ ಪೊಲೀಸರು ಹಾಗೂ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.