ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ವಿಚಾರ: KPCC ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ  ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದಕ್ಕೂ ನಮಗೂ ಸಂಬಂಧವಿಲ್ಲ. ಅವರು ಯಾರನ್ನಾದರೂ ಮುಖ್ಯಮಂತ್ರಿ, ಮಂತ್ರಿ ಮಾಡಿಕೊಳ್ಳಲಿ. ಅದು ಅವರಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಭ್ರಷ್ಟಾಚಾರ ಹೆಚ್ಚಾಗಿದೆ. ಉತ್ತಮ ಆಡಳಿತ ನೀಡಿ ಜನರಿಗೆ ನ್ಯಾಯ ಒದಗಿಸಿಕೊಡುವುದು ನಮ್ಮ ಗುರಿ ‘ ಎಂದರು.

ಇದೇ ವೇಳೆ ಮತದಾರರ ಪಟ್ಟಿಯಿಂದ ಎಷ್ಟು ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇಡೀ ರಾಜ್ಯಾದ್ಯಂತ ಎಷ್ಟು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ ಎಂಬ ಅಧಿಕೃತ ದಾಖಲೆ ನಮ್ಮ ಬಳಿ ಇವೆ. ನಾವದನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ‘ ಎಂದು ತಿಳಿಸಿದರು.

Leave a Reply

Your email address will not be published.