ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ..!

ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿಎಂ ಭೇಟಿಗಾಗಿ ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜನರು ತಮ್ಮ ಹಲವು ಸಮಸ್ಯೆಗಳನ್ನೊಳಗೊಂಡ ಮನವಿಯನ್ನು ಸಿಎಂ ಗೆ ಸಲ್ಲಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬೊಮ್ಮಾಯಿ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಹಾಗೂ ಇನ್ನೂ ಹಲವು ಸಮಸ್ಯೆಗಳಿಗೆ ಶೀಘ್ರವೇ ಪರಿಹರಿಸು ವುದಾಗಿ ಭರವಸೆ ನೀಡಿದರು. ಇದೇ ವೇಳೆ ನೂಕು ನುಗ್ಗಲು ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು, ಪೊಲೀಸರು, ಅಧಿಕಾರಿಗಳು ಸೇರಿದಂತೆ ಇನ್ನಿತರರು  ಉಪಸ್ಥಿತರಿದ್ದರು.

Leave a Reply

Your email address will not be published.