ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ಚರ್ಚೆಯಾಗುತ್ತಿರುವುದು ನಿಜ: ಡಿ.ಕೆ.ಶಿವಕುಮಾರ್

ಜಿಲ್ಲೆ

ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕು ಮಾರ್, ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ಚರ್ಚೆಯಾಗುತ್ತಿರುವುದು ನಿಜ. ಅವರು ನಮಗೆ ಏನೂ ಹೇಳಬೇಕಾಗಿಲ್ಲ. ಮಂತ್ರಿಗಳು, ಶಾಸಕರು ,ಮಾಜಿ ಶಾಸಕರು ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಬೆಂಕಿ ಇಲ್ಲದೆ ಹೊಗೆ ಆಡೊದಕ್ಕೆ ಆಗುತ್ತಾ? ಬದಲಾವಣೆ ಮಾಡ್ತಾರೋ ಬಿಡ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರು ಗುಸುಗುಸು ಮಾತಾಡ್ತಿರೋದು ನಮ್ಮ ಕಿವಿಗೂ ಬಿದ್ದಿದೆ ಎಂದರು.

ಬಿಹಾರ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣ ಎನ್ನುವುದು ಸಾಧ್ಯತೆಗಳ ಕಲೆ. ಕರ್ನಾಟಕ ರಾಜ್ಯದಲ್ಲೂ ಏನು ಬೇಕಾದರೂ ಆಗಬಹುದು. ಶಿವಸೇನೆ ಜೊತೆ ಸೇರಿಕೊಂಡು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರಲಿಲ್ಲವೇ ಎಂದು ಪ್ರಶ್ನಿಸಿದರು. ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಒಂದು ಲಕ್ಷ ಜನ ರಾಷ್ಟ್ರಧ್ವಜ ಹಿಡಿದು ಪಕ್ಷಾತೀತವಾಗಿ ಹೆಜ್ಜೆ ಹಾಕುತ್ತೇವೆ. ಅಂದು ಎಲ್ಲರೂ ಮೆಟ್ರೋ ಬಳಕೆ ಮಾಡಿ ಎಂದು ಮನವಿ ಮಾಡುತ್ತೇನೆ ಎಂದರು.

Leave a Reply

Your email address will not be published.