ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಮೃತದೇಹ ಪತ್ತೆ

ರಾಷ್ಟ್ರೀಯ

ಹೈದರಾಬಾದ್:  ಬಿಜೆಪಿ ಪಕ್ಷದ ನಾಯಕ ಜ್ಞಾನೇಂದ್ರ ಪ್ರಸಾದ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸೋಮವಾರ ಅವರ ನಿವಾಸದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸೋಮವಾರ ಪೊಲೀಸರಿಗೆ ಮಾಹಿತಿ ಬಂದಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರೆಳಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಕಂಡುಬಂದಿದೆ.

ಜ್ಞಾನೇಂದ್ರ ಪ್ರಸಾದ್ ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್‌ಹೌಸ್‌ನಲ್ಲಿ ವಾಸಿಸುತ್ತಿದ್ದು, ಆತ್ಮಹತ್ಯೆ  ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published.