ಹಾಸ್ಯನಟ ರಾಜು ಶ್ರೀವಾಸ್ತವ್ ಆರೋಗ್ಯ ಮತ್ತಷ್ಟು ಗಂಭೀರ

ಚಲನಚಿತ್ರ

ಜಿಮ್ ಮಾಡುವ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದು ಖ್ಯಾತ ಹಾಸ್ಯ ನಟ ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಘಳಿಸಿರುವ ಹೃದಯಾಘಾತವಾದ ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಾಜು ಶ್ರೀವಾತ್ಸವ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ. ಡಾ. ನಿತೀಶ್ ನಾಯ್ಕ್ ನೇತೃತ್ವದಲ್ಲಿ ರಾಜು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಮೂಲತಃ ಕಾನ್ಪುರ ಮೂಲದವರಾಗಿರುವ ರಾಜು ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಒಂದು ದಿನದ ಹಿಂದೆ ಎಂದಿನಂತೆ ದೆಹಲಿಯಲ್ಲಿರುವ ಜಿಮ್‌ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಈ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published.