Commonwealth Games.. ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ ಸಿಂಧು

ಕ್ರೀಡೆ

ಬರ್ಮಿಂಗ್ ಹ್ಯಾಂ: ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಅಗ್ರ ಕ್ರಮಾಂಕದ ಷಟ್ಲರ್ ಪಿ.ವಿ. ಸಿಂಧು ಕಾಮನ್ ವೆಲ್ತ್ ಗೇಮ್ಸ್ ನ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಇಂದು ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ಅಂತರದಲ್ಲಿ ಜಯಗಳಿಸುವ ಮೂಲಕ ಪಿ.ವಿ. ಸಿಂಧು ಚಿನ್ನದ ಪದಕ ಜಯಿಸಿದ್ದಾರೆ.

ಸಿಂಧು ಈ ಮುನ್ನ 2014ರಲ್ಲಿ ಗ್ಲಾಸ್ಕೋವ್ ನಲ್ಲಿ ನಡೆದಿದ್ದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಜಯಿಸಿದ್ದರೆ, 2018 ರಲ್ಲಿ ಗೋಲ್ಡ್ ಕೋಸ್ಟ್ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ಸಿಂಧು ‘ನಾನು ಚಿನ್ನದ ಪದಕಕ್ಕಾಗಿ ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಈ ವರ್ಷ ಚಿನ್ನದ ಪದಕ ಜಯಿಸಿದ್ದೇನೆ, ನನಗೆ ಬಹಳ ಸಂತೋಷವಾಗುತ್ತಿದೆ’ ಎಂದು ತಿಳಿಸಿದ್ದಾರೆ.

Leave a Reply

Your email address will not be published.