ಬಿಜೆಪಿಯವರು ಎಲ್ಲಾ ಕ್ಷೇತ್ರಗಳಲ್ಲಿ ಕೋಮುವಾದ ತಂದಿಡುತ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು

ಬೆಂಗಳೂರು: ಬಿಜೆಪಿಯವರು ಎಲ್ಲಾ ಕ್ಷೇತ್ರಗಳಲ್ಲಿ ಕೋಮುವಾದ ತಂದಿಡುತ್ತಿದ್ದಾರೆ. ಜನರ ದಾರಿ ತಪ್ಪಿಸಿ, ಹಿಂದುತ್ವದ ಅಮಲು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಈ ಹಿಂದೆಯೂ ಮುಸ್ಲಿಂ ಯುವತಿಯರು ಹಿಜಾಬ್‌ ಹಾಕುತ್ತಿದ್ದರು, ಈಗಲೂ ಹಿಜಾಬ್ ಹಾಕುತ್ತಿದ್ದಾರೆ. ಆದರೆ, ಹಿಂದಿನಿಂದಲೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಿದ್ದರಾ? ಎಂದು ಬೆಂಗಳೂರಿನಲ್ಲಿ ನಡೆದ ಬಿ.ಕೆ. ಹರಿಪ್ರಸಾದ್​ ಅಭಿನಂದನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Leave a Reply

Your email address will not be published.