
ಉಕ್ರೇನ್ ನಲ್ಲಿ ವಿದ್ಯಾರ್ಥಿ ನವೀನ್ ನಿಧನಕ್ಕೆ ನಟಿ ರಮ್ಯಾ ಸಂತಾಪ
ಬೆಂಗಳೂರು: ನವೀನ್ ನಿಧನಕ್ಕೆ ಮಾಜಿ ಸಂಸದೆ, ನಟಿ ರಮ್ಯಾ ಸಂತಾಪ ಸೂಚಿಸಿದ್ದಾರೆ. ಖಾರ್ಕೀವ್ ಮೆಡಿಕಲ್ ವಿಶ್ವವಿದ್ಯಾನಿಲ ಯದಲ್ಲಿ ಓದುತ್ತಿದ್ದ ಕರ್ನಾಟಕದ ಹಾವೇರಿ ಜಿಲ್ಲೆಯ 21 ವರ್ಷದ ನವೀನ್ ಶೇಖರಪ್ಪ ಗೌಡರ್ ಅವರು ನಿಧನರಾಗಿದ್ದಾರೆ. ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ವೇಗವಾಗಿ ಸ್ಥಳಾಂತರಿಸುತ್ತದೆ ಎಂದು ಭಾವಿಸುತ್ತೇನೆ. ನವೀನ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂದು ಟ್ವಿಟರ್ ನಲ್ಲಿ ರಮ್ಯಾ ಸಂತಾಪ ಸೂಚಿಸಿದ್ದಾರೆ.