ಕೊಡಗು : ಕಾಂಗ್ರೆಸ್ ನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮಹಿಳೆಯೊಬ್ಬರು ತನ್ನ ಎಫ್ ಬಿ ಖಾತೆಯಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಬರವಣಿಗೆ ಬರೆದ ಹಿನ್ನೆಲೆ ಜೂನ್ 5 ರಂದು ಕುಶಾಲನಗರದ ಡಿ.ವೈ.ಎಸ್.ಪಿ ಕಛೇರಿ ಎದುರು ತೆರಳಿ ಮಹಿಳೆ ವಿರುದ್ದ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಪೊಲೀಸರು ಪ್ರಕರಣ ದಾಖಲಿಸಲು ವಿಳಂಬ ಮಾಡಿದ್ದಾರೆಂದು ಸಿಟ್ಟಿಗೆದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿ.ವಿ ಶಶಿದರ್ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ಬ ಬಳಕೆ ಮಾಡಿದ್ದಾರೆ.
ಇನ್ನೂ ಪ್ರಧಾನಿಯನ್ನು ನಿಂದಿಸುವ ಬರದಲ್ಲಿ ಅಸಂವಿಧಾನಿಕ ಪದ ಬಳಸಿದ್ದಾರೆ. ಪ್ರತಿಭಟನೆ ವೇಳೆ ಯಾರು ಇದ್ದಾರೆ ಎಂಬುದನ್ನೆ ಮರೆತು ಈ ರೀತಿ ಪದ ಬಳಕೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಎಂ.ಎಲ್.ಸಿ ವೀಣಾ ಅಚ್ಚಯ್ಯ ಹಾಗೂ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು ಇದ್ದರು ಯಾರೊಬ್ಬರೂ ಶಶಿಧರ್ ರನ್ನು ತಡೆಯುವ ಪ್ರಯತ್ನ ಮಾಡದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನೂ ದೇಶದ ಪ್ರಧಾನಿಗೆ ಈ ರೀತಿ ಅವಾಚ್ಯಾ ಪದ ಬಳಕೆ ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಈ ವಿಚಾರ ಜೂ. 5 ರಂದು ನಡೆದಿದ್ರೂ ಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಮೋದಿ ಅಭಿಮಾನಿಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ.