
ಲೆಜೆಂಡರಿ ಲೆಗ್ ಸ್ಪಿನ್ನರ್ ‘’ಶೇನ್ ವಾರ್ನ್’’ ನಿಧನಕ್ಕೆ ವಿರೇಂದ್ರ ಸೆಹ್ವಾಗ್ ಸಂತಾಪ
ಆಸ್ಟ್ರೇಲಿಯಾ ಕ್ರಿಕೆಟ್ನ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. 52 ವರ್ಷದ ಮಾಜಿ ಕ್ರಿಕೆಟಿಗನ ದಿಢೀರ್ ಸಾವಿನಿಂದಾಗಿ ಕ್ರಿಕೆಟ್ ಲೋಕ ಆಘಾತಕ್ಕೊಳಗಾಗಿದ್ದು, ಸಾರ್ವಕಾಲಿಕ ಶ್ರೇಷ್ಠ ಆಟಗಾರನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಮ್ಮಿಂದ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶ್ರೇಷ್ಠ ಸ್ಪಿನ್ನರ್ಗಳಲ್ಲಿ ಒಬ್ಬರಾದ ಸೂಪರ್ ಸ್ಟಾರ್ ವಾರ್ನ್ ಇನ್ನಿಲ್ಲ. ಬದುಕು ಬಹಳ ಸೂಕ್ಷ್ಮವಾಗಿದೆ. ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.