ಕಾಂಗ್ರೆಸ್ ಪಾದಯಾತ್ರೆಯ ಉದ್ದೇಶ ಇಡೀ ಜಗತ್ತಿಗೆ ಗೊತ್ತಿದೆ – ಸಿಎಂ ಬೊಮ್ಮಾಯಿ

ಬೆಂಗಳೂರು

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ ಎಂದು ಇಡೀ ಜಗತ್ತಿಗೆ ಗೊತ್ತಿದೆ. ಏನಾದರೂ ಮಾಡಲಿ ಆದರೆ ಕೊರೊನಾ ನಿಯಮ ಪಾಲನೆ ಮಾಡಲಿ. ಮೊದಲು ಕಾಂಗ್ರೆಸ್ ಅವರ ಬೇಜವಾಬ್ದಾರಿ ತನದಿಂದ ಕೊರೊನಾ ಹೆಚ್ಚಾಯ್ತು. ಇದೀಗ ರಾಜ್ಯ ಶಾಂತವಾಗಿದೆ. ಮತ್ತೆ ಕೊರೊನಾ ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

Leave a Reply

Your email address will not be published.