ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಮೇಲೆ ಮಾರಣಾಂತಿಕ ಹಲ್ಲೆ: BJP ಕಾರ್ಯಕರ್ತರ ವಿರುದ್ಧ ಆಕ್ರೋಶ

ಅಪರಾಧ ರಾಷ್ಟ್ರೀಯ

ಅಗರ್ತಲಾ: ಅಗರ್ತಲಾದ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದೀಪ್ ರಾಯ್ ಮೇಲಿನ ಹಲ್ಲೆಗೆ ಕೈ ಕಾರ್ಯಕರ್ತರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಸುದೀಪ್ ರಾಯ್ ಬರ್ಮಮ್ ಅವರ ಮೇಲೆ ನಡೆದ ಹಲ್ಲೆಯ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಭಾರತೀಯ ಯುವ ಕಾಂಗ್ರೆಸ್, ದೇಶದಲ್ಲಿ ಜನಪ್ರತಿನಿಧಿಗಳ ಸುರಕ್ಷತೆಯನ್ನು ಪ್ರಶ್ನಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆಯ ಆರೋಪ ಮಾಡಿದೆ.

ಅಗರ್ತಲಾದ ಶಾಸಕ ಸುದೀಪ್ ರಾಯ್ ಬರ್ಮನ್ ಅವರ ಮೇಲೆ ಬಿಜೆಪಿ ಗೂಂಡಾಗಳಿಂದ ನಡೆದಿರುವ ಹಿಂಸಾತ್ಮಕ ದಾಳಿ ಖಂಡನೀಯ. ಬಿಜೆಪಿ ಕಾರ್ಯಕರ್ತರು ಹಿಂಸಾಚಾರದ ಮೊರೆ ಹೋಗುತ್ತಿರುವುದು ಇದೇ ಮೊದಲೇನಲ್ಲಾ. ಇದು ಕೊಳಕು ರಾಜಕೀಯ ಹಾಗೂ ಈ ರೀತಿ ದೇಶವನ್ನು ಮುನ್ನಡೆಸಲು ಬಯಸುತ್ತಿರುವುದು ನಾಚಿಗೇಡಿನ ಸಂಗತಿ. ಬಿಜೆಪಿ ಕಾನೂನು ಮತ್ತು ಸುವ್ಯವಸ್ಥೆಯನ್ನು ತಿರಸ್ಕರಿಸಿ ಪ್ರತಿಪಕ್ಷ ನಾಯಕರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Leave a Reply

Your email address will not be published.